ಮಂಗಳೂರು | ನಡುರಾತ್ರಿ ತಲ್ವಾರ್‌ ಹಿಡಿದು ಹೊಡೆದಾಡಿಕೊಂಡ ರೌಡಿಶೀಟರ್‌ಗಳು

Public TV
1 Min Read

ಮಂಗಳೂರು: ನಡುರಾತ್ರಿ ರೌಡಿಶೀಟರ್‌ಗಳು (Rowdy Sheeters) ತಲ್ವಾರ್ ಹಿಡಿದು ಗಲಾಟೆ ಮಾಡಿಕೊಂಡಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಪೂರ್ವದ್ವೇಷದ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರ ಗುಂಪಿನ ಮಧ್ಯೆ ತಲ್ವಾರ್ ದಾಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮೆಮಾರ್ ಎಂಬಲ್ಲಿ‌ ರೌಡಿಗಳ ಗ್ಯಾಂಗ್ ನಡುಬೀದಿಯಲ್ಲಿ ಯುವಕರನ್ನ ಅಟ್ಟಾಡಿಸಿ ತಲ್ವಾರಿನಲ್ಲಿ ಕೊಚ್ಚಿದ್ದು, ಗಾಯಗೊಂಡ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಎಂಬವರ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ಶಿವಮೊಗ್ಗ| ಬಾನೆಟ್ ಮೇಲೆ ಪೊಲೀಸ್ ಸಿಬ್ಬಂದಿಯನ್ನು ಹೊತ್ತೊಯ್ದ ಕಾರು

ಸ್ಥಳೀಯ ನಿವಾಸಿಗಳಾದ ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ ಯಾನೆ ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂಬವರು ಹಲ್ಲೆ ನಡೆಸಿದ ಆರೋಪಿಗಳು. ಗಾಯಗೊಂಡ ತಸ್ಲೀಮ್ ಹಾಗೂ ಸ್ನೇಹಿತರು ಮಾತನಾಡುತ್ತಿದ್ದ ವೇಳೆ ತಸ್ಲೀಮ್‌ಗೆ ಕರೆಯೊಂದು ಬಂದಿತ್ತು. ಈ ವೇಳೆ ಆರೋಪಿಯು ಅವಾಚ್ಯ ಶಬ್ದಗಳಿಂದ ನಿಂದಿಸಿ, ಆತ ಇರುವಲ್ಲಿಗೆ ಬರುವಂತೆ ಸವಾಲು ಹಾಕಿದ್ದ. ಈ ವೇಳೆ ತಸ್ಲೀಮ್ ಹಾಗೂ ತಂಡ ಅಮ್ಮೆಮಾರ್ ಶಾಲಾ ಬಳಿಗೆ ಹೋದಾಗ ಅಲ್ಲಿ ಆರೋಪಿಗಳು ದಾಳಿ ನಡೆಸಿದ್ದಾರೆ.

ಈ ಸಂಬಂಧ ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜೋತುಬಿದ್ದ ವಿದ್ಯುತ್ ವೈರ್‌ಗೆ ಇಬ್ಬರು ರೈತರು ಬಲಿ – ಸೆಸ್ಕ್ ಜೂನಿಯರ್ ಎಂಜಿನಿಯರ್, ಲೈನ್‌ಮ್ಯಾನ್ ಸಸ್ಪೆಂಡ್

Share This Article