ಮತ್ತೊಮ್ಮೆ ರೌಡಿಶೀಟರ್ ಯಶಸ್ವಿನಿ ಅಟ್ಟಹಾಸ – ಮಾರ್ಗ ಮಧ್ಯೆ ಅಡ್ಡಗಟ್ಟಿ ಮಹಿಳೆಗೆ ಥಳಿತ

Public TV
1 Min Read

ಬೆಂಗಳೂರು: ಶ್ರೀರಾಮಸೇನೆಯ ಮಹಿಳಾ ರಾಜ್ಯಾಧ್ಯಕ್ಷೆ ರೌಡಿಶೀಟರ್ ಯಶಸ್ವಿನಿ ಮತ್ತೊಮ್ಮೆ ತನ್ನ ಅಟ್ಟಹಾಸ ಮುಂದುವರಿಸಿದ್ದು, ಇದೀಗ ಲಲಿತಾ ಎಂಬವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಗಂಗಮ್ಮನಗುಡಿ ನೀಲಗಿರಿ ತೊಪ್ಪಿನಲ್ಲಿ ಈ ಘಟನೆ ನಡೆದಿದೆ. ಲಲಿತಾ ಅವರು ದಾರಿಯಲ್ಲಿ ಹೋಗುವಾಗ ಮಾರ್ಗ ಮಧ್ಯೆ ಅಡ್ಡಗಟ್ಟಿ ಯಶಸ್ವಿನಿ ಹಾಗೂ 8 ಜನ ಮಹಿಳೆಯರು ಸೇರಿ ಹಿಗ್ಗಾಮುಗ್ಗ ಥಳಿಸಿದ್ದಾರೆ. ಪರಿಣಾಮ ಗಾಯಗೊಂಡಿರುವ ಲಲಿತಾ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದಾರೆ.

ಹಲ್ಲೆ ಯಾಕೆ..?
ಯಶಸ್ವಿನಿ ವಿರುದ್ಧ ಲಲಿತಾ ದೂರು ನೀಡಿದ್ದು, ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಈ ಪ್ರಕರಣದ ಸಂಬಂಧ ಶುಕ್ರವಾರ ನ್ಯಾಯಾಲಯದಲ್ಲಿ ತೀರ್ಪು ಬರೋದಿತ್ತು. ನ್ಯಾಯಾಲಯಕ್ಕೆ ಲಲಿತಾ ಹಾಜರಾಗಬಾರದೆಂದು ಲಲಿತಾರ ಮೇಲೆ ಯಶಸ್ವಿನಿ & ಟೀಂ ಹಲ್ಲೆ ನಡೆಸಿದೆ ಎನ್ನಲಾಗಿದೆ. ಇದನ್ನೂ ಓದಿ: ನೀವೇ ನನ್ನ ಹೆಂಡ್ತಿಯನ್ನ ಕಂಟ್ರೋಲ್ ಮಾಡ್ಬೇಕು ಸಾರ್ – ರೌಡಿಶೀಟರ್ ಯಶಸ್ವಿನಿ ಪತಿಯಿಂದ ಪೊಲೀಸ್ರಿಗೆ ಮನವಿ

ಬನಶಂಕರಿ ಠಾಣೆಯ ರೌಡಿಶೀಟರ್ ಆಗಿರುವ ಯಶಸ್ವಿನಿಗಾಗಿ ಗಂಗಮ್ಮನಗುಡಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *