RRR ಸಿನಿಮಾ ಬಿಡುಗಡೆ ಮುಂದೂಡಿಕೆ ಅಧಿಕೃತ

Public TV
2 Min Read

ಹೈದರಾಬಾದ್: ಕೊರನಾ ಕಾರಣದಿಂದಾಗಿ ಆರ್‌ಆರ್‌ಆರ್‌ ಸಿನಿಮಾ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಕುರಿತಾಗಿ ಚಿತ್ರತಂಡ ಅಧಿಕೃತ ಮಾಹಿತಿಯನ್ನು ಹೊರ ಹಾಕಿದೆ.

ಟ್ವೀಟ್‍ನಲ್ಲಿ ಏನಿದೆ?: ಎಲ್ಲರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ನಾವು ನಮ್ಮ ಚಲನಚಿತ್ರ ಬಿಡುಗಡೆಯನ್ನು ಮುಂದೂಡಲು ಇಚ್ಚಿಸಿದ್ದೇವೆ. ಎಲ್ಲರ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಚಿತ್ರತಂಡ ಸಿನಿಮಾ ಬಿಡುಗಡೆಯ ದಿನಾಂಕವನ್ನು ಮೂಂದುಡಿದೆ ಎನ್ನುವ ಮಾಹಿತಿಯನ್ನು ಹೊರ ಹಾಕಿದೆ.

ನಮ್ಮ ನಿರಂತರ ಪ್ರಯತ್ನಗಳ ಹೊರತಾಗಿಯೂ, ಕೆಲವು ಸನ್ನಿವೇಶಗಳು ನಮ್ಮ ನಿಯಂತ್ರಣವನ್ನು ಮೀರಿದೆ. ಭಾರತದ ಅನೇಕ ರಾಜ್ಯಗಳು ಚಿತ್ರಮಂದಿರಗಳನ್ನು ಮುಚ್ಚುತ್ತಿರುವುದರಿಂದ, ನಿಮ್ಮ ಉತ್ಸಾಹವನ್ನು ಹಿಡಿದಿಟ್ಟುಕೊಳ್ಳಲು ಕೇಳುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲದಾಗಿದೆ. ನಾವು ಭಾರತೀಯ ಸಿನಿಮಾದ ವೈಭವವನ್ನು ಮರಳಿ ತರುವುದಾಗಿ ಭರವಸೆ ನೀಡುತ್ತಿದ್ದೇವೆ ಮತ್ತು ಸರಿಯಾದ ಸಮಯದಲ್ಲಿ ಸಿನಿಮಾವನ್ನು ಬಿಡುಗಡೆ ಮಾಡುತ್ತೇವೆ ಎಂದು ಚಿತ್ರತಂಡ ಅಧಿಕೃತವಾಗಿ ತಿಳಿಸಿದೆ.

 

View this post on Instagram

 

A post shared by Taran Adarsh (@taranadarsh)

ರಾಮ್ ಚರಣ್ ತೇಜಾ, ಜೂ.ಎನ್‍ಟಿಆರ್ ಅಭಿನಯಿಸಿರುವ ನಿರ್ದೇಶಕ ರಾಜಮೌಳಿ ಸಾರಥ್ಯದಲ್ಲಿ ಬಹು ಕೋಟಿ ವೆಚ್ಚದಲ್ಲಿ ತಯಾರಾಗಿರುವ ಆರ್‌ಆರ್‌ಆರ್‌ ಸಿನಿಮಾ 2022ರ ಜನವರಿ 7ರಂದು ಐದು ಭಾಷೆಗಳಲ್ಲಿ ತೆರೆ ಕಾಣಬೇಕಾಗಿತ್ತು. ಆದರೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಇದೀಗ ಆರ್‌ಆರ್‌ಆರ್‌ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.

 

ತಮಿಳುನಾಡು, ದೆಹಲಿ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೊನಾ ನಿರ್ಬಂಧ ವಿಧಿಸಲಾಗಿದ್ದು, ಬೆಂಗಳೂರಿನಲ್ಲಿಯೂ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಪಕರು ಚಿತ್ರ ಬಿಡುಗಡೆಗೊಳಿಸದಿರಲು ತೀರ್ಮಾನಿಸಿದ್ದಾರೆ. ಈಗಾಗಲೇ ಆರ್‍ಆರ್‍ಆರ್ ಚಿತ್ರತಂಡ ಸಿನಿಮಾ ಕುರಿತಂತೆ ಭರ್ಜರಿಯಾಗಿ ಪ್ರಮೋಷನ್ ನಡೆಸಿದ್ದು, ಚಿತ್ರ ನೋಡಲು ಅಭಿಮಾನಿಗಳು ಸಾಕಷ್ಟು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡುವುದನ್ನು ಬಿಟ್ಟು ನಿರ್ಮಾಪಕರಿಗೆ ಬೇರೆ ದಾರಿ ಇಲ್ಲದಂತಾಗಿದೆ.

ಬೆಂಗಳೂರಿನಲ್ಲಿ ಆರ್‌ಆರ್‌ಆರ್‌ ಚಿತ್ರದ ಪ್ರಿರಿಲೀಸ್ ಇವೆಂಟ್ ಜನವರಿ 2ಕ್ಕೆ ನಿಗದಿಯಾಗಿತ್ತು. ಆದರೆ ಬೆಂಗಳೂರಿನಲ್ಲಿಯೂ ಕೊರೊನಾ ಹೆಚ್ಚಾಗುತ್ತಿರುವ ಕಾರಣ ಪ್ರಮೋಷನ್ ಕಾರ್ಯಕ್ರಮವನ್ನು ಚಿತ್ರತಂಡ ಮೊಟಕುಗೊಳಿಸಿತ್ತು. ಇದೀಗ ಸಿನಿಮಾ ಬಿಡುಗಡೆ ದಿನಾಂಕವನ್ನು ಮಂದೂಡಿರುವುದಾಗಿ ಆರ್‌ಆರ್‌ಆರ್‌ ಚಿತ್ರತಂಡ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *