ಇಂದು ಚಿಕ್ಕಬಳ್ಳಾಪುರದಲ್ಲಿಆರ್.ಆರ್.ಆರ್ ಮೆಗಾ ಪ್ರೀ ರಿಲೀಸ್ ಇವೆಂಟ್ : ಏನೆಲ್ಲ ವಿಶೇಷ?

Public TV
2 Min Read

ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್’ ಸಿನಿಮಾದ ಕನ್ನಡ ಅವತರಣಿಕೆಯ ಮೆಗಾ ಪ್ರೀ ರಿಲೀಸ್ ಇವೆಂಟ್ ಇಂದು ಚಿಕ್ಕಬಳ್ಳಾಪುರದಲ್ಲಿ ನಡೆಯುತ್ತಿದೆ. ಹಾಗಾಗಿ ಕಲಾವಿದರ ದಂಡೇ ಅಲ್ಲಿ ಸೇರಲಿದೆ. ಸಿನಿಮಾದ ನಟರು ಮತ್ತು ಕಾರ್ಯಕ್ರಮದಲ್ಲಿ ಭಾಗಿ ಆಗಲು ಬರುತ್ತಿರುವ  ನೆಚ್ಚಿನ ನಟರನ್ನು ನೋಡುವುದಕ್ಕಾಗಿ ಅಭಿಮಾನಿಗಳು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಕಾಯುತ್ತಿದ್ದಾರೆ. ಏರ್ ಪೋರ್ಟ್ಗೆ ಅಭಿಮಾನಿಗಳ ಸಾಗರವೇ ಹರಿದು ಬಂದಿದ್ದರಿಂದ, ಅಲ್ಲಿನ ಸಿಬ್ಬಂದಿಗೆ ಮತ್ತೊಂದು ಟೆನ್ ಷನ್ ಶುರುವಾಗಿದೆ.

ಇಂದು ಸಂಜೆ 06 ಗಂಟೆಗೆ ಆರಂಭವಾಗಲಿರುವ ಪ್ರೀ ರಿಲೀಸ್ ಇವೆಂಟ್, ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ನೂರಕ್ಕೂ ಹೆಚ್ಚು ಎಕರೆ ವಿಸ್ತೀರ್ಣದಲ್ಲಿ ಜಾಗದಲ್ಲಿ ನಡೆಯುತ್ತಿದೆ. ಸಿನಿಮಾದ ನಾಯಕ ನಟರಾದ ಜ್ಯೂ.ಎನ್‍ಟಿಆರ್, ರಾಮ್ ಚರಣ್ ಹಾಗೂ ನಿರ್ದೇಶಕ ರಾಜಮೌಳಿ, ಆಲಿಯಾ ಭಟ್ ಸೇರಿದಂತೆ ಬಹುತೇಕ ತಾರಾಗಣವೇ ಕಾರ್ಯಕ್ರಮದಲ್ಲಿ ಹಾಜರಿರಲಿದೆ. ಇದನ್ನೂ ಓದಿ : ಪುನೀತ್ ಹುಟ್ಟು ಹಬ್ಬಕ್ಕೆ ವಿಶ್ ಮಾಡದ ರಶ್ಮಿಕಾ ಮಂದಣ್ಣ ಮತ್ತೆ ನೆಟ್ಟಿಗರು ಗರಂ

ಕಳೆದ ರಾತ್ರಿಯೇ ಬೆಂಗಳೂರಿಗೆ ಕೆಲವು ನಟರು ಆಗಮಿಸಿದ್ದರಿಂದ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟರನ್ನ ನೋಡಲು ಏರ್ಪೋರ್ಟ್ ನಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ನೆಚ್ಚಿನ ನಟರನ್ನು ಸಂಭ್ರಮದಿಂದ ಬರಮಾಡಿಕೊಂಡರು. ಇದನ್ನೂ ಓದಿ: ಪುನೀತ್ ಗೆ ಮರಣೋತ್ತರ ‘ ಸಹಕಾರ ರತ್ನ’ ಪ್ರಶಸ್ತಿ: ಸಚಿವ ಎಸ್.ಟಿ.ಸೋಮಶೇಖರ್ ಘೋಷಣೆ

ಕೇವಲ ಸಿನಿಮಾ ನಟರು ಮಾತ್ರವಲ್ಲ, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವರ ಸುಧಾಕರ್ ಸೇರಿದಂತೆ ಕೆಲ ರಾಜಕಾರಣಿಗಳು ಕೂಡ ಭಾಗಿ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಕಾರ್ಯಕ್ರಮವನ್ನು ಅಗಲಿದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಅರ್ಪಿಸುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಹಾಗಾಗಿ ಟನ ಶಿವರಾಜ್ ಕುಮಾರ್ ಕೂಡ ಭಾಗಿ ಆಗುವ ಸಾಧ್ಯತೆಯಿದೆ. ಇದನ್ನೂ ಓದಿ : ದಾಖಲೆ ಬರೆದ ಜೇಮ್ಸ್ – ಎರಡೇ ದಿನದಲ್ಲಿ 100 ಕೋಟಿ ಕ್ಲಬ್ ಸೇರಿದ ಪುನೀತ್ ಚಿತ್ರ

ಈಗಾಗಲೇ ಲಕ್ಷಾಂತರ ಮಂದಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದ್ದು, ಇಡೀ ದೇಶದಲ್ಲೇ ಅತಿ ದೊಡ್ಡದಾದ ಇವೆಂಟ್ ಇದಾಗಿದೆ. ಭದ್ರತೆ ಮತ್ತು ಸರ್ವ ಸಿದ್ಧತೆಯನ್ನು ಮಾಡಿಕೊಂಡು ಇವೆಂಟ್ ಮಾಡಲಾಗುತ್ತಿದೆ ಎಂದಿದೆ ಚಿತ್ರತಂಡ.

Share This Article
Leave a Comment

Leave a Reply

Your email address will not be published. Required fields are marked *