ಮೌಳಿಯ ರಂಗೀನ್ ಲೋಕದಲ್ಲಿ ಮಿಂದೆದ್ದ ಜನಸಾಗರ… ಒಂದೇ ವೇದಿಕೆಯಲ್ಲಿ ಸೌತ್ ಸ್ಟಾರ್ಸ್‍ಗಳ ಸಮಾಗಮ

Public TV
3 Min Read

ಗಮಗಿಸುಗ ಸ್ಟೇಜ್.. ಕಣ್ಣಾಯಿಸಿದ ಕಡೆಯೆಲ್ಲಾ ಅಭಿಮಾನಿಗಣ. ಇಳಿಸಂಜೆಯಲ್ಲಿ ಸಂಗೀತ-ನೃತ್ಯದ ಯಾನ. ನೆಚ್ಚಿನ ಸ್ಟಾರ್ಸ್ ಕಣ್ತುಂಬಿಕೊಂಡು ಪುಳಕಿತರಾದ ಫ್ಯಾನ್ಸ್. ಇದೆಲ್ಲಾ ಗಡಿನಾಡು ಚಿಕ್ಕಬಳ್ಳಾಪುರದಲ್ಲಿ ನಡೆದ RRR ಅದ್ಧೂರಿ ಪ್ರೀ-ರಿಲೀಸ್ ಇವೆಂಟ್ ಝಲಕ್.

ಮಾರ್ಚ್ 25ಕ್ಕೆ ಪಂಚ ಭಾಷೆಯಲ್ಲಿ ಅದ್ಧೂರಿಯಾಗಿ ತೆರೆಕಾಣ್ತಿರುವ ಮಲ್ಟಿಸ್ಟಾರ್ ಸಿನಿಮಾ RRR ಪ್ರೀ-ರಿಲೀಸ್ ಇವೆಂಟ್ ಧಾಮ್ ಧೂಮ್ ಅಂತಾ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇಳಿಸಂಜೆಯಲ್ಲಿ ಅದ್ಧೂರಿಯಾಗಿ ನಡೆದ ಪ್ರೀ-ರಿಲೀಸ್ ಇವೆಂಟ್ ಗೆ ಜನಸಾಗರವೇ ಹರಿದು ಬಂದಿತ್ತು. ಸುಮಾರು ನೂರು ಎಕರೆ ಜಾಗದಲ್ಲಿ ನಡೆದ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಕೆ.ಸುಧಾಕರ್, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಇಡೀ RRR ಬಳಗ ಸಾಕ್ಷಿಯಾಯ್ತು. ಇದನ್ನೂ ಓದಿ: ‘ದಿ ಕಾಶ್ಮೀರ್‌ ಫೈಲ್ಸ್’ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸಹಾಯ ಮಾಡುವುದಿಲ್ಲ: ಸಂಜಯ್ ರಾವತ್

ಯಂಗ್ ಟೈಗರ್ ಕನ್ನಡ ಪ್ರೀತಿಗೆ ಕನ್ನಡಿಗರ ಸಲಾಂ
ಕನ್ನಡ ಭಾಷೆ.. ಕನ್ನಡಿಗರ ಮೇಲೆ ವಿಶೇಷ ಅಭಿಮಾನ ಹೊಂದಿರುವ ಯಂಗ್ ಟೈಗರ್ ಜೂನಿಯರ್ ಎನ್‍ಟಿಆರ್ ಕನ್ನಡದಲ್ಲಿಯೇ ಮಾತು ಆರಂಭಿಸಿ ಎಲ್ಲರ ಗಮನಸೆಳೆದರು. ಅಪ್ಪು ಎಲ್ಲಿಯೂ ಹೋಗಿಲ್ಲ. ಗಾಳಿ, ನೀರು ಎಲ್ಲೆಡೆ ಅಪ್ಪು ಇದ್ದಾರೆ ಅಂತಾ ನೆಚ್ಚಿನ ಗೆಳೆಯನನ್ನು ನೆನೆದ ತಾರಕ್, ಮಾರ್ಚ್ 25ಕ್ಕೆ ತ್ರಿಬಲ್ ಆರ್ ಸಿನಿಮಾವನ್ನು ಫ್ಯಾಮಿಲಿ ಸಮೇತರಾಗಿ ನೋಡಿ ಅಂತ ಮನವಿ ಮಾಡಿಕೊಂಡರು.

ಅಪ್ಪು ನೆನೆದು ಭಾವುಕ
ತ್ರಿಬಲ್ ಆರ್ ಸಿನಿಮಾ ಪ್ರೀ-ರಿಲೀಸ್ ಇವೆಂಟ್ ಸ್ಪೆಷಲ್ ಗೆಸ್ಟ್ ಆಗಿ ಆಗಮಿಸಿದ್ದ ನಟ ಶಿವರಾಜ್ ಕುಮಾರ್, ಒಂದು ಕಡೆ ಸಂತೋಷನೂ ಆಗ್ತಾ ಇದೆ. ಮತ್ತೊಂದು ಕಡೆ ದುಃಖ ಇದೆ. ಅಪ್ಪುನ ಕಳೆದುಕೊಂಡು ದುಃಖದಲ್ಲಿದ್ದೇವೆ. ನಮ್ಮ ದುಃಖದಲ್ಲಿ ಭಾರತೀಯ ಚಿತ್ರರಂಗ ಇದೆ, ಸರ್ಕಾರ ಇದೆ. ಬೊಮ್ಮಾಯಿ ಅವರು ಅಣ್ಣನ ಸ್ಥಾನದಲ್ಲಿ ನಿಂತಿದ್ದಾರೆ. ನಮಗಾದಷ್ಟೇ ನೋವು ಅವರಿಗೂ ಆಗಿದೆ. ರಾಮ್ ಚರಣ್, ಜ್ಯೂ.ಎನ್‍ಟಿಆರ್ ಬಂದು ನಾವು ನಿಮ್ಮ ತಮ್ಮ ಎಂದಾಗ ಖುಷಿ ಆಯ್ತು. ಅಪ್ಪುನ ಇವರಲ್ಲಿ, ಅಭಿಮಾನಿಗಳಲ್ಲಿ ಕಾಣುತ್ತಿದ್ದೆ.

ನಾನು ರಾಜಮೌಳಿ ದೊಡ್ಡ ಫ್ಯಾನ್. ಜ್ಯೂ.ಎನ್‍ಟಿಆರ್ ಅವರ ಎಲ್ಲ ಸಿನಿಮಾ ಫಸ್ಟ್ ಡೇ ಫಸ್ಟ್ ಶೋ ನೋಡ್ತೀನಿ. ರಾಮ್ ಚರಣ್, ಪವನ್ ಕಲ್ಯಾಣ್, ಚಿರಂಜೀವಿ, ಅಜಿತ್, ವಿಜಯ್ ಪ್ರತಿಯೊಬ್ಬರ ಸಿನಿಮಾನೂ ನಾನು ಥಿಯೇಟರ್‍ನಲ್ಲೇ ನೋಡೋದು. ನನಗೆ ಮನೆಯಲ್ಲೇ ಶೋ ಹಾಕಿಸಿಕೊಂಡು ಸಿನಿಮಾ ನೋಡೋದು ಇಷ್ಟ ಇಲ್ಲ. ನಾನು ಅಭಿಮಾನಿ ತರಹ ಥಿಯೇಟರ್ ಗೆ ಹೋಗೆ ಸಿನಿಮಾ ನೋಡೋದು ಎಂದಿದ್ದಾರೆ ಶಿವರಾಜ್‌ಕುಮಾರ್. RRR ಸಿನಿಮಾ ಯಶಸ್ಸು ಆಗಲಿ ಎಂದು ಹಾರೈಸಿದರು.

ಇಡೀ RRR ಬಳಗಕ್ಕೆ ಧನ್ಯವಾದ ಹೇಳಿದ ಮೌಳಿ
ಚಿತ್ರಬ್ರಹ್ಮ ರಾಜಮೌಳಿ ಅದ್ಧೂರಿ ಪ್ರೀ-ರಿಲೀಸ್ ಇವೆಂಟ್ ನಲ್ಲಿ ಇಡೀ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು. ಶಿವಣ್ಣ, ಮುಖ್ಯಮಂತ್ರಿ, ಆರೋಗ್ಯ ಸಚಿವರ ಬಗ್ಗೆ ಕನ್ನಡದಲ್ಲಿಯೇ ಮಾತನಾಡಿ ಗಮನಸೆಳೆದ ಮೌಳಿ, ಇಂತಹ ಅದ್ಧೂರಿ ಇವೆಂಟ್ ಆಯೋಜಿಸಿದ KVN ಸಂಸ್ಥೆಯ ಒಡೆಯ ವೆಂಕಟ್ ಅವರಿಗೆ ಧನ್ಯವಾದ ತಿಳಿಸಿದರು. ರಾಮ್ ಚರಣ್ ಸಿನಿಮಾ ನೋಡಲು ಕಾತುರನಾಗಿದ್ದೇನೆ. ಪ್ರತಿಯೊಬ್ಬರು ಥಿಯೇಟರ್ ಗೆ ಹೋಗಿ ಸಿನಿಮಾ ನೋಡಿ  ಪ್ರೋತ್ಸಾಹಿಸಿ ಎಂದರು.

ಕಿತ್ತೂರು ರಾಣಿ ಚೆನ್ನಮ್ಮ ಬಗ್ಗೆ ತೋರಿಸಿರುವುದು ಹೆಮ್ಮೆ
ಸ್ವಾತಂತ್ರ್ಯ ಹೋರಾಟದ ಸತ್ಯಗಳು ಯುವಪೀಳಿಗೆಗೆ ತಿಳಿಸುವ ಕೆಲಸ ಆಗಬೇಕಿದೆ. ಸ್ವಾತಂತ್ರ್ಯ ಸೇನಾನಿ RRR ಸಿನಿಮಾ ನೋಡಿ ಇಡೀ ದೇಶ ಹೆಮ್ಮೆಪಡಲಿದೆ ಎಂದ ಮುಖ್ಯಮಂತ್ರಿ, ಕಿತ್ತೂರು ರಾಣಿ ಚೆನ್ನಮ್ಮ ಬಗ್ಗೆ RRR ಸಿನಿಮಾದಲ್ಲಿ ತೋರಿಸಿರುವುದು ಹೆಮ್ಮೆ ಎಂದರು. ಇದನ್ನೂ ಓದಿ: ಸಿಎಂ ಬೊಮ್ಮಾಯಿ ಅಣ್ಣನ ಸ್ಥಾನದಲ್ಲಿ ನಿಂತು ನಮ್ಮಷ್ಟೇ ದುಃಖ ಅನುಭವಿಸಿದ್ದಾರೆ: ಶಿವಣ್ಣ

ಭಾರತದ ಅತಿದೊಡ್ಡ ಇವೆಂಟ್‍ನ್ನು ಚಿಕ್ಕಬಳ್ಳಾಪುರದಲ್ಲಿ ಏರ್ಪಡಿಸಿದ್ದ ಪ್ರತಿಷ್ಠಿತ ಕೆವಿಎನ್ ಪ್ರೋಡಕ್ಷನ್ ಹೌಸ್ RRR ಸಿನಿಮಾ ಕರುನಾಡಿನಾದ್ಯಂತ RRR ಚಿತ್ರವನ್ನು ವಿತರಣೆ ಮಾಡಲಿದೆ. ಸುಮಾರು 450 ಕೋಟಿ ಬಜೆಟ್‍ನಲ್ಲಿ ದಾನಯ್ಯ ಸಿನಿಮಾಗೆ ಬಂಡವಾಳ ಹೂಡಿದ್ದು, ರಾಜಮೌಳಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಜೂನಿಯರ್ ಎನ್‌ಟಿಆರ್, ರಾಮ್ ಚರಣ್, ಆಲಿಯಾ ಭಟ್, ಅಜಯ್ ದೇವಗನ್ ಸೇರಿದಂತೆ ದೊಡ್ಡತಾರಾಬಳಗ ಸಿನಿಮಾದಲ್ಲಿ ನಟಿಸಿದ್ದು, ಇದೇ 25ಕ್ಕೆ ವಲ್ರ್ಡ್ ವೈಡ್ RRR ಸಿನಿಮಾ ರಿಲೀಸ್ ಅಗ್ತಿದೆ.

Share This Article
Leave a Comment

Leave a Reply

Your email address will not be published. Required fields are marked *