– ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ
ಬೆಂಗಳೂರು: ಕಾರವಾರದಲ್ಲಿ (Karwar) 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (Super Speciality Hospital) ನಿರ್ಮಿಸುವುದಾಗಿ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆ ಕೊನೆಗೂ ಈ ಬಜೆಟ್‌ನಲ್ಲಿ ಈಡೇರಿಕೆ. ಕಾರವಾರ ಅಲ್ಲದೇ ಯಾದಗಿರಿಯಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದಾಗಿ ತಿಳಿಸಲಾಗಿದೆ. ಇದನ್ನೂ ಓದಿ: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್; 56,432 ಹುದ್ದೆಗಳ ಭರ್ತಿ
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಮೂಲಭೂತ ಸೌಲಭ್ಯ ಮತ್ತು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದಾಗಿ ಸಿಎಂ ತಿಳಿಸಿದ್ದಾರೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸಲಾಗುವುದು. ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕೆ ಸಲಕರಣೆ ಕಿಟ್ ದರ 10,000 ರೂ.ನಿಂದ 20,000 ರೂ.ಗೆ ಹೆಚ್ಚಿಸಲಾಗುವುದು ಎಂದಿದ್ದಾರೆ. ಇದನ್ನೂ ಓದಿ: Budget 2026 | ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಜೈವಿಕ ತಂತ್ರಜ್ಞಾನ ಉದ್ಯಮಗಳು, ನವೀನ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಸಮುದ್ರ ಕೃಷಿಯನ್ನು ಪ್ರೋತ್ಸಾಹಿಸಲು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪನೆ ಮಾಡಲಾಗುವುದು. ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

