ಬಾಗಲಕೋಟೆ: ಉಪಚುನಾವಣೆ (Bypoll) ನೀತಿ ಸಂಹಿತೆ ಉಲ್ಲಂಘಿಸಿ ಹಣ ಸಾಗಾಟ ಮಾಡುತ್ತಿದ್ದ ವಾಹನ ಅಡ್ಡಗಟ್ಟಿ 32.50 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ.
ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಣವನ್ನು ಹೊನ್ನಾಕಟ್ಟಿ ಚೆಕ್‌ಪೋಸ್ಟ್‌ನಲ್ಲಿ ಸೀಜ್ ಮಾಡಲಾಗಿದೆ. Ka 36 p 3991 ನಂಬರಿನ ಮಾರುತಿ ಎರ್ಟಿಗಾ ಕಾರಲ್ಲಿ ಹಣ ಸಾಗಿಸಲಾಗುತ್ತಿತ್ತು. ಎಸ್‌ಎಸ್‌ಟಿ ತಂಡದಿಂದ ವಾಹನ ತಪಾಸಣೆ ವೇಳೆ ಹಣ ಪತ್ತೆಯಾಗಿತ್ತು. ಇದನ್ನೂ ಓದಿ: ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಏ.9 ರಂದು ಉಪಚುನಾವಣೆ -ಮೇ 4ಕ್ಕೆ ಫಲಿತಾಂಶ
ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಏ.9 ರಂದು ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್ ಶಾಸಕ ಹೆಚ್.ವೈ.ಮೇಟಿ ನಿಧನರಾಗಿದ್ದಕ್ಕೆ ಬಾಗಲಕೋಟೆ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸಲಾಗಿದೆ. ಬಿಜೆಪಿಯು ವೀರಣ್ಣ ಚರಂತಿಮಠ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಕಾಂಗ್ರೆಸ್‌ನಿಂದ ಯಾರು ಕಣಕ್ಕಿಳಿಯುತ್ತಾರೆಂಬುದು ಕುತೂಹಲ ಮೂಡಿಸಿದೆ.

