ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ 50 ಕೋಟಿ ರೂ.ನಿಗದಿ: ಸಚಿವ ರಾಜಣ್ಣ

Public TV
1 Min Read

ತುಮಕೂರು: ಮಧುಗಿರಿಯ ಏಕಶಿಲಾ ಬೆಟ್ಟಕ್ಕೆ (Madhugiri Betta) ರೋಪ್ ವೇ (Ropeway) ಕಾಮಗಾರಿಗೆ ರಾಜ್ಯ ಸರ್ಕಾರ 50 ಕೋಟಿ ರೂ. ನಿಗದಿ ಮಾಡಿದೆ. ಶೀಘ್ರವಾಗಿ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ (K.N Rajanna) ತಿಳಿಸಿದ್ದಾರೆ.

ಪಟ್ಟಣದ ಸಿದ್ಧರಕಟ್ಟೆ ಸಮೀಪ ಅಧಿಕಾರಿಗಳ ತಂಡದೊಂದಿಗೆ ಸ್ಥಳ ಪರಿಶೀಲಿಸಿ ಅವರು ಮಾತನಾಡಿದರು. ಈ ವೇಳೆ, ರೋಪ್ ವೇ ಯೋಜನೆಗೆ ಹಂತ – ಹಂತವಾಗಿ ಸರ್ಕಾರದಿಂದ ಹಣ ಬಿಡುಗಡೆ ಮಾಡಿಸಲಾಗುವುದು. 10 ವರ್ಷಗಳ ಹಿಂದೆಯೇ ಏಕಾಶಿಲಾ ಬೆಟ್ಟಕ್ಕೆ ರೋಪ್ ವೇ ಯೋಜನೆಗೆ 9 ಎಕರೆ ಜಾಗ ಮೀಸಲಿಡಲಾಗಿತ್ತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೊಡಚಾದ್ರಿ ಸೇರಿದಂತೆ ದೇಶದ 18 ಕಡೆ ರೋಪ್‌ವೇ ನಿರ್ಮಿಸಲು ಕೇಂದ್ರ ಯೋಜನೆ

ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ರೋಪ್ ವೇ ಕಾಮಗಾರಿಗಳಿಗಾಗಿ ಪ್ರತ್ಯೇಕ ಪ್ರಾಧಿಕಾರ ಸ್ಥಾಪಿಸಲಾಗಿದೆ. ಆ ಇಲಾಖೆಯ ಮಾನದಂಡಗಳಂತೆ ಕಾಮಗಾರಿಗಳನ್ನು ರಾಜ್ಯದಲ್ಲಿ ನಿರ್ವಹಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಾಲಿನ ದರ ಏರಿಕೆ ಸರ್ಕಾರದ ಆರನೇ ಭಾಗ್ಯ: ಮಹೇಶ್ ಟೆಂಗಿನಕಾಯಿ

Share This Article