ಆರ್‌ಎಸ್‌ಎಸ್‌ ಭಾರತದ ತಾಲಿಬಾನ್‌: ಬಿಕೆ ಹರಿಪ್ರಸಾದ್‌

Public TV
1 Min Read

ನವದೆಹಲಿ: ಆರ್‌ಎಸ್‌ಎಸ್‌ (RSS) ಭಾರತದ ತಾಲಿಬಾನ್‌ (Taliban) ಎಂದು ವಿಧಾನ ಪರಿಷತ್‌ ಸದಸ್ಯ ಬಿಕೆ ಹರಿಪ್ರಸಾದ್‌ (BK Hariprasad) ಕಿಡಿಕಾರಿದ್ದಾರೆ.

ದೆಹಲಿಯ ಕೆಂಪುಕೋಟೆಯಲ್ಲಿ ಆರ್‌ಎಸ್‌ಎಸ್‌ ಸಂಘಟನೆಯನ್ನು ಮೋದಿ (Narendra Modi) ಹೊಗಳಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಆರ್‌ಎಸ್‌ಎಸ್‌ ದೇಶದದಲ್ಲಿ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ಶಾಂತಿ ಕದಡುವ ಆರ್‌ಎಸ್‌ಎಸ್‌ ಭಾರತದ ತಾಲಿಬಾನ್‌ಗಳು ಎಂದು ವಾಗ್ದಾಳಿ ನಡೆಸಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ಯಾರಾದರೂ ಸಂಘಿಗಳು ಭಾಗವಹಿಸಿದ್ದಾರಾ? ಆರ್‌ಎಸ್‌ಎಸ್ ನೋಂದಾಯಿತ ಸಂಘಟನೆಯಲ್ಲದಿರುವುದು ನಾಚಿಕೆಗೇಡಿನ ಸಂಗತಿ. ಅವರಿಗೆ ಎಲ್ಲಿಂದ ಹಣ ಸಿಗುತ್ತದೆ ಎಂದು ನಮಗೆ ತಿಳಿದಿಲ್ಲ. ದೇಶದಲ್ಲಿ ಕೆಲಸ ಮಾಡಲು ಬಯಸುವ ಯಾವುದೇ ಎನ್‌ಜಿಒ ಸಂವಿಧಾನದ ಪ್ರಕಾರ ನೋಂದಾಯಿಸಿಕೊಳ್ಳಬೇಕು ಎಂದರು. ಇದನ್ನೂ ಓದಿ: ವರ್ಷದ ಅಂತ್ಯಕ್ಕೆ ಮಾರುಕಟ್ಟೆಗೆ ಬರಲಿದೆ ಮೇಡ್ಇನ್ಇಂಡಿಯಾ ಚಿಪ್‌: ಮೋದಿ ಘೋಷಣೆ

 

ಮುಹಮ್ಮದ್ ಅಲಿ ಜಿನ್ನಾ, ಕಾಂಗ್ರೆಸ್ ಮತ್ತು ಆಗಿನ ವೈಸ್‌ರಾಯ್ ಲಾರ್ಡ್ ಮೌಂಟ್‌ಬ್ಯಾಟನ್ ಅವರು ದೇಶ ವಿಭಜನೆಗೆ ಕಾರಣ ಎಂದು ಎನ್‌ಸಿಇಆರ್‌ಟಿ ಪಠ್ಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಇತಿಹಾಸವನ್ನು ತಿರುಚುವ ಮಾಸ್ಟರ್ಸ್ ಎಂದು ತಿರುಗೇಟು ನೀಡಿದರು.

ವಿಭಜನೆಗಾಗಿ ಬಂಗಾಳದಲ್ಲಿ ಮೊದಲ ನಿರ್ಣಯವನ್ನು ಮಂಡಿಸಿದವರು ಫಜ್ಲುಲ್ ಹಕ್ ಮತ್ತು ಶ್ಯಾಮ ಪ್ರಸಾದ್ ಮುಖರ್ಜಿ. ಜಿನ್ನಾ ಮತ್ತು ಸಾವರ್ಕರ್ ಎರಡೂ ಧರ್ಮಗಳಿಗೆ ಪ್ರತ್ಯೇಕ ರಾಜ್ಯ ಬೇಕು ಎಂದು ಅಭಿಪ್ರಾಯಪಟ್ಟರು. ಅವರು ಅದಕ್ಕೆ ಕಾಂಗ್ರೆಸ್ ಅನ್ನು ದೂಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Share This Article