ಆರ್‌ಎಸ್‌ಎಸ್‌ ಮುಖಂಡ,ಮಾಜಿ ಪರಿಷತ್‌ ಸದಸ್ಯ ಪ್ರೊ.ನರಹರಿ ನಿಧನ

Public TV
1 Min Read

ಬೆಂಗಳೂರು: ಆರ್‌ಎಸ್‌ಎಸ್ (RSS) ಮುಖಂಡ, ಮಾಜಿ ಪರಿಷತ್‌ ಸದಸ್ಯ ಪ್ರೊ.ಕೃ.ನರಹರಿ (93) ನಿಧನರಾಗಿದ್ದಾರೆ.

ಬುಧವಾರ ಬೆಳಗ್ಗೆ 4.30ಕ್ಕೆ ವಯೋಸಹಜ ಸಮಸ್ಯೆಯಿಂದ ಬೆಂಗಳೂರಿನಲ್ಲಿರುವ ಸ್ವಗೃಹದಲ್ಲಿ ನರಹರಿ(Narahari) ವಿಧಿವಶರಾದರು.

ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.  ಇದನ್ನೂ ಓದಿ:  ಕಲಾವಿದರ ಮೇಲೆ ಸೇಡು ತೀರಿಸಿದ ನಟ್ಟು ಬೋಲ್ಟ್‌ ಮಿನಿಸ್ಟರ್‌- ಜೆಡಿಎಸ್‌ ಕಿಡಿ

ತುರ್ತು ಪರಿಸ್ಥಿತಿಯ ವಿರುದ್ಧವೂ ಹೋರಾಟ ಮಾಡಿ ಜೈಲುವಾಸ ಅನುಭವಿಸಿದ್ದರು. ನರಹರಿ ಅವರ ನಿಧನಕ್ಕೆ ಸಂಘದ ಪ್ರಮುಖರು, ಬಿಜೆಪಿ ನಾಯಕರು ಕಂಬನಿ ಮಿಡಿದಿದ್ದಾರೆ.

Share This Article