ಭಯ ಹುಟ್ಟಿಸಲು ಉಗ್ರರು ಹತ್ಯೆಯನ್ನು ಗುರಿಯಾಗಿಸಿಕೊಂಡಿದ್ದಾರೆ: ಮೋಹನ್ ಭಾಗವತ್

Public TV
2 Min Read

-ಜನಸಂಖ್ಯಾ ನಿಯಂತ್ರಣಕ್ಕೆ ಕಾನೂನು ತರಬೇಕು

ನಾಗಪುರ: ಭಯ ಮೂಡಿಸುವುದಕ್ಕಾಗಿ ಉಗ್ರರು ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ದಾಳಿಗೆ ಜನರನ್ನು ಗುರಿಯಾಗಿಸಿಕೊಂಡಿದ್ದಾರೆ. ಜನಸಂಖ್ಯಾ ಸ್ಫೋಟ ನಿಯಂತ್ರಣಕ್ಕೆ ಸರ್ಕಾರ ಕಾನೂನು ತರಬೇಕು. ಇದನ್ನು ಪ್ರತಿಯೊಬ್ಬರೂ ಸ್ವೀಕರಿಸುತ್ತಾರೆ ಎಂದು ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ನಾಗಪುರದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ವಿಜಯ ದಶಮಿ ಕಾರ್ಯಕ್ರಮದಲ್ಲಿ ಮಾತನಾಡಿದ ಮೋಹನ್ ಭಾಗವತ್, ಗಡಿಯಲ್ಲಿ ಹೆಚ್ಚಿನ ಸೈನಿಕರನ್ನು ನಿಯೋಜಿಸಿ ಅವರು ಸದಾ ಸನ್ನದ್ಧರಾಗಿರುವಂತೆ ನೋಡಿಕೊಳ್ಳುವ ಅಗತ್ಯವಿದೆ. ಬಿಟ್ ಕಾಯಿನ್ ಮತ್ತು ವೇದಿಕೆ ಕುರಿತು ಪ್ರಸ್ತಾಪಿಸಿದ ಅವರು ಇವುಗಳ ಮೇಲೆ ನಿಯಂತ್ರಣ ಹೇರಲು ಸರ್ಕಾರ ಪ್ರಯತ್ನಿಸಬೇಕು ಎಂದೂ ಸಲಹೆ ನೀಡಿದರು. ಇದನ್ನೂ ಓದಿ:  ಜನಸಂಖ್ಯಾ ಅಸಮತೋಲನ ತಡೆಗೆ ಹೊಸ ನೀತಿ ಜಾರಿಗೊಳಿಸಬೇಕು: ಮೋಹನ್ ಭಾಗವತ್

ರಾಷ್ಟ್ರದ ಅಭಿವೃದ್ಧಿಗೆ ತೊಡಕಾಗಿರುವುದು ವೇಗವಾಗಿ ವೃದ್ಧಿಸುತ್ತಿರುವ ಜನಸಂಖ್ಯೆ. ಇದರ ಬಗ್ಗೆ ಹಲವರು ಕಳವಳಗೊಂಡಿದ್ದಾರೆ. ಜನಸಂಖ್ಯೆ ವೃದ್ಧಿಯಿಂದ ಸಾಕಷ್ಟು ಸಮಸ್ಯೆಗಳು ಭವಿಷ್ಯದಲ್ಲಿ ಎದುರಾಗಲಿವೆ. ಸಮಯೋಚಿತವಾಗಿ ಜನಸಂಖ್ಯೆ ನಿಯಂತ್ರಣದ ಸವಾಲು ತೆಗೆದುಕೊಳ್ಳಬೇಕಿದೆಎಂದಿದ್ದಾರೆ. ಇದನ್ನೂ ಓದಿ: ಅಮೇರಿಕಾದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

ಜನಸಂಖ್ಯಾ ಸ್ಫೋಟವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ವವ್ಯಾಪಿ ಮತ್ತು ಪರಿಣಾಮಕಾರಿ ಕಾನೂನುಗಳನ್ನು ಅನುಷ್ಠಾನಕ್ಕೆ ತರಬೇಕು. ಸರ್ವರಿಗೂ ಅರಿವು ಮೂಡಿಸಬೇಕು. ತಾರತಮ್ಯವಿಲ್ಲದೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಮೂಲ ಹಿಂದುಗಳಿಗೆ ಕಿರುಕುಳ, ಅಪರಾಧ ಕೃತ್ಯಗಳ ಹೆಚ್ಚಳ ಮತ್ತು ಹುಟ್ಟಿದ ಊರನ್ನೇ ತೊರೆಯುವಂತಹ ಒತ್ತಡಗಳು ನಿರ್ಮಾಣಗೊಳ್ಳಲು ಅಸಮತೋಲನದ ಜನಸಂಖ್ಯಾ ವೃದ್ಧಿ ಕಾರಣವಾಗಿದೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಸಂದರ್ಭ ಹಿಂಸಾಕೃತ್ಯಗಳು ಸ್ಫೋಟಗೊಳ್ಳಲು ಮತ್ತು ಅಲ್ಲಿನ ಹಿಂದುಗಳಲ್ಲಿ ದಯಾನಿಯ ಪರಿಸ್ಥಿತಿ ನಿರ್ಮಾಣಗೊಳ್ಳಲು ಅಸಮತೋಲನದ ಜನಸಂಖ್ಯಾ ವೃದ್ಧಿ ಮತ್ತು ಅಲ್ಲಿನ ಸರ್ಕಾರದ ನಿರ್ಲಕ್ಷ್ಯ ಧೋರಣೆಗಳು ಕಾರಣವಾಗಿದೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *