‘ಬಘೀರ’ ಚಿತ್ರದಲ್ಲಿ ರುಕ್ಮಿಣಿ ವಸಂತ್ ಪಾತ್ರ ಹೇಗಿದೆ? ಹೊರಬಿತ್ತು ಇಂಟ್ರಸ್ಟಿಂಗ್‌ ಮಾಹಿತಿ

Public TV
1 Min Read

ಸ್ಯಾಂಡಲ್‌ವುಡ್ ಬೆಡಗಿ ರುಕ್ಮಿಣಿ ವಸಂತ್ (Rukmini Vasanth) ಸದ್ಯ ಕನ್ನಡದ ಬ್ಯುಸಿ ನಟಿ. ಪರಭಾಷೆಗಳಲ್ಲೂ ಬೇಡಿಕೆ ಸೃಷ್ಟಿಸಿಕೊಂಡಿರುವ ‘ಸಪ್ತಸಾಗರದಾಚೆ ಎಲ್ಲೋ’ ನಟಿ ರುಕ್ಮಿಣಿ ಇದೀಗ ‘ಬಘೀರ’ (Bagheera Film) ಸಿನಿಮಾದಲ್ಲಿನ ಅವರ ಬಗ್ಗೆ ಇಂಟ್ರಸ್ಟಿಂಗ್ ಮಾಹಿತಿ ಹೊರಬಿದ್ದಿದೆ. ಇದನ್ನೂ ಓದಿ:ಸೆಲೆಬ್ರಿಟಿಗಳಿಗೆ ಸಿಹಿಸುದ್ದಿ ಕೊಟ್ಟ ಡಿಬಾಸ್- ‘ಡೆವಿಲ್’ ಚಿತ್ರದ ರಿಲೀಸ್ ಡೇಟ್ ಅನೌನ್ಸ್

ರೋರಿಂಗ್ ಸ್ಟಾರ್ ಶ್ರೀಮುರಳಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಕಾಣಿಸಿಕೊಳ್ತಿದ್ದಾರೆ. ಈ ಚಿತ್ರದಲ್ಲಿ ಡಾಕ್ಟರ್ ಪಾತ್ರವನ್ನು ನಿರ್ವಹಿಸಿದ್ದಾರೆ. ವಿಶೇಷ ಅಂದರೆ, ರುಕ್ಮಿಣಿ ವಸಂತ್ ನಟನೆಯ ಸನ್ನಿವೇಶಗಳ ಚಿತ್ರೀಕರಣ ಈಗಾಗಲೇ ಮುಗಿದಿದೆ. ಅವರ ಪಾತ್ರಕ್ಕೆ ಬಹಳ ಮಹತ್ವವಿದೆ. ಈ ಚಿತ್ರವನ್ನು ಹೊಂಬಾಳೆ ಸಂಸ್ಥೆ ನಿರ್ಮಾಣ ಮಾಡಿದೆ. ಇದನ್ನೂ ಓದಿ:ಮೆಗಾಸ್ಟಾರ್ ಚಿರಂಜೀವಿ ಚಿತ್ರದಲ್ಲಿ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್

ಅಂದಹಾಗೆ, ವಿಜಯ್ ಸೇತುಪತಿ (Vijay Sethupathi) ಜೊತೆ ‘ಏಸ್’ ಸಿನಿಮಾದಲ್ಲಿ ಲೀಡ್ ರೋಲ್‌ನಲ್ಲಿ ರುಕ್ಮಿಣಿ ನಟಿಸಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಚಿತ್ರ ರಿಲೀಸ್ ಆಗಲಿದೆ. ಇದರ ಜೊತೆಗೆ ತಮಿಳಿನ ನಟ ಶಿವಕಾರ್ತಿಕೇಯನ್‌ಗೆ (Sivakarthikeyan) ಜೋಡಿಯಾಗಿ ನಟಿಸಿದ್ದಾರೆ. ಈ ಚಿತ್ರ ಕೂಡ ವರ್ಷದ ಅಂತ್ಯದಲ್ಲಿ ಥಿಯೇಟರ್‌ನಲ್ಲಿ ದರ್ಶನ ಕೊಡಲಿದೆ. ಸೌತ್ ಸಿನಿಮಾಗಳ ಜೊತೆ ಕನ್ನಡದ ‘ಭೈರತಿ ರಣ್‌ಗಲ್’ ಚಿತ್ರದಲ್ಲಿ ಶಿವಣ್ಣಗೆ ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ.

ಅದಷ್ಟೇ ಅಲ್ಲ, ‘ಕಾಂತಾರ’ ಚಾಪ್ಟರ್ 1ರಲ್ಲಿ ರುಕ್ಮಿಣಿ ನಾಯಕಿ ಎಂಬ ಸುದ್ದಿ ಕೂಡ ಇದೆ. ಅಧಿಕೃತ ಘೋಷಣೆ ಆಗಬೇಕಿದೆ. ಕೈತುಂಬಾ ಅವಕಾಶಗಳ ಜೊತೆ ಬ್ಯುಸಿಯಿರುವ ನಟಿ ಮುಂದಿನ ದಿನಗಳಲ್ಲಿ ನಂಬರ್ ಒನ್ ಪಟ್ಟಕ್ಕೆ ಏರುವುದು ಗ್ಯಾರಂಟಿ ಅಂತಿದ್ದಾರೆ ಸಿನಿಪಂಡಿತರು.

Share This Article