ಟಾಲಿವುಡ್‌ನಲ್ಲಿ ರುಕ್ಮಿಣಿ ವಸಂತ್‌ಗೆ ಭರ್ಜರಿ ಡಿಮ್ಯಾಂಡ್

By
1 Min Read

ಸ್ಯಾಂಡಲ್‌ವುಡ್ ಬ್ಯೂಟಿ ರುಕ್ಮಿಣಿ ವಸಂತ್‌ಗೆ (Rukmini Vasanth) ಟಾಲಿವುಡ್‌ನಲ್ಲಿ ಸಖತ್ ಬೇಡಿಕೆ ಶುರುವಾಗಿದೆ. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗು ವರ್ಷನ್‌ನಲ್ಲಿ ರಿಲೀಸ್ ಆದ ಬಳಿಕ ರುಕ್ಮಿಣಿ ವಸಂತ್‌ಗೆ ತೆಲುಗಿನ ಪ್ರೇಕ್ಷಕರು ಕೂಡ ಫಿದಾ ಆಗಿದ್ದಾರೆ. ಈ ಬೆನ್ನಲ್ಲೇ ರುಕ್ಮಿಣಿಗೆ ಬಂಪರ್ ಆಫರ್‌ಗಳು ಅರಸಿ ಬರುತ್ತಿವೆ.

‘ಬೀರ್‌ಬಲ್’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಟಿ, ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ನಾಯಕಿಯಾಗಿ ರುಕ್ಮಿಣಿ ವಸಂತ್ ಮಿಂಚಿದ್ದರು. ಪ್ರಿಯಾ-ಮನು ಲವ್ ಸ್ಟೋರಿ ನೋಡುಗರಿಗೆ ಖುಷಿ ಕೊಟ್ಟಿತ್ತು. ರುಕ್ಮಿಣಿ ಆ್ಯಕ್ಟಿಂಗ್‌ಗೆ ಫ್ಯಾನ್ಸ್ ಫುಲ್ ಮಾರ್ಕ್ಸ್ ಕೊಟ್ಟರು. ಇದೇ ಚಿತ್ರ ತೆಲುಗಿಗೆ ಡಬ್ ಆಗಿ ಪ್ರೇಕ್ಷಕರ ದಿಲ್ ಗೆದ್ದಿದೆ. ಇದನ್ನೂ ಓದಿ:ರಜನಿಕಾಂತ್ ವಿರುದ್ಧ ಮತ್ತೆ ಗುಡುಗಿದ ವಾಟಾಳ್ ನಾಗರಾಜ್

‘ಸಪ್ತ ಸಾಗರಲು ದಾಟಿ’ ಈಗ ಟಾಲಿವುಡ್ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ತೆಲುಗಿನಿಂದ ನಟಿಗೆ ಒಳ್ಳೆಯ ಸಿನಿಮಾ ಅವಕಾಶಗಳು ಅರಸಿ ಬರುತ್ತಿದೆ. ಒಳ್ಳೆಯ ಆಫರ್ ಸಿಕ್ಕರೆ ತೆಲುಗಿನಲ್ಲಿ ನಟಿಸುವೆ ಎಂದು ರುಕ್ಮಿಣಿ ಕೂಡ ಖುಷಿಯಿಂದ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

ತೆಲುಗಿನಲ್ಲಿ ಮೊದಲೇ ಕನ್ನಡದ ನಟಿಮಣಿಯರ ದರ್ಬಾರ್ ಜೋರಾಗಿದೆ. ರಶ್ಮಿಕಾ ಮಂದಣ್ಣ(Rashmika Mandanna), ಶ್ರೀಲೀಲಾ (Sreeleela), ಪೂಜಾ ಹೆಗ್ಡೆ, ಕೃತಿ ಶೆಟ್ಟಿ ಹಾವಳಿ ಮಾಡುತ್ತಿರುವ ಬೆನ್ನಲ್ಲೇ ಇದೀಗ ರುಕ್ಮಿಣಿ ವಸಂತ್ ಕೂಡ ಅದೇ ಹಾದಿಯಲ್ಲಿ ಹೆಜ್ಜೆ ಇಡ್ತಿದ್ದಾರೆ. ಕನ್ನಡದ ನಟಿಯರ ನಡುವೆಯೇ ರುಕ್ಮಿಣಿ ಗೆದ್ದು ಬೀಗುತ್ತಾರಾ ಕಾಯಬೇಕಿದೆ.

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್