ಪ್ರಾರ್ಥನಾ ಮಂದಿರದ ಮೇಲೂ ಕ್ಷಿಪಣಿ, ಬಾಂಬ್ ದಾಳಿ – ಕೀವ್ ವಶಕ್ಕೆ ರಷ್ಯಾ ಹರಸಾಹಸ

By
2 Min Read

ಕೀವ್: ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾದ ದಾಳಿ 18ನೇ ದಿನಕ್ಕೆ ಕಾಲಿಟ್ಟಿದೆ. ಉಕ್ರೇನ್‍ನ ಪ್ರಾರ್ಥನಾ ಮಂದಿರಗಳನ್ನು ಬಿಡದೆ ರಷ್ಯಾ ದಾಳಿ ಮುಂದುವರಿಸಿದೆ.

ರಷ್ಯಾ ಮಿಲಿಟರಿ ಪಡೆ ಉಕ್ರೇನ್ ರಾಜಧಾನಿ ಕೀವ್ ನಗರಕ್ಕೆ 4 ಕಿ.ಮೀ ದೂರದಲ್ಲಿ ಇದ್ದು ಕೀವ್ ವಶಪಡಿಸಿಕೊಳ್ಳಲು ಹರಸಾಹಸ ಪಡುತ್ತಿದೆ. ಉಕ್ರೇನ್‍ನ ಕೀವ್ ಮತ್ತು ಖಾರ್ಕಿವ್ ನಗರದಲ್ಲಿ ಘನಘೋರ ಯುದ್ಧ ಆಗುತ್ತಿದ್ದು, ರಷ್ಯಾದ ಕ್ಷಿಪಣಿ, ಬಾಂಬ್ ದಾಳಿಗೆ ನಗರಗಳು ಹೊತ್ತಿ ಉರಿಯುತ್ತಿದೆ. ಇನ್ನೊಂದೆಡೆ ಮರಿಯುಪೋಲ್‍ನಲ್ಲಿ ರಷ್ಯಾದ ದಾಳಿಗೆ ಸಿಕ್ಕ ಸಿಕ್ಕಲ್ಲಿ ರಕ್ತಪಾತವಾಗುತ್ತಿದೆ. ಕೀವ್ ನಗರಕ್ಕೆ ಮತ್ತಷ್ಟು ಹತ್ತಿರವಾದ ರಷ್ಯಾ ಸೇನೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರದೊಂದಿಗೆ ಲಗ್ಗೆ ಇಟ್ಟಿದೆ. ಈಗಾಗಲೇ ಎರಡು ಕಡೆಯ ನೂರಾರು ಯುದ್ಧ ಟ್ಯಾಂಕರ್‌ಗಳು ಉಡೀಸ್ ಆಗಿದೆ. ಇದನ್ನೂ ಓದಿ: ಗೊರಗುಂಟೆಪಾಳ್ಯ ಫ್ಲೈಓವರ್‌ನಲ್ಲಿ ರಾತ್ರಿ ಸಂಚಾರ ಬಂದ್

ಉಕ್ರೇನ್‍ನಲ್ಲಿರುವ ಪ್ರಾರ್ಥನಾ ಮಂದಿಗಳನ್ನು ಬಿಡದಂತೆ ರಷ್ಯಾ ದಾಳಿ ಮುಂದುವರಿಸಿದ್ದು, ಉಕ್ರೇನ್‍ನ ಜನರನ್ನು ಸ್ಥಳಾಂತರಿಸುವ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿ ರಷ್ಯಾ ಸೇನೆ ಗುಂಡಿನ ಮಳೆ ಸುರಿಸಿದೆ. ದಾಳಿಯಲ್ಲಿ 7 ನಾಗರಿಕರು ಸಾವನ್ನಪ್ಪಿರುವ ಬಗ್ಗೆ ಉಕ್ರೇನ್‍ನ ಗುಪ್ತಚರ ಮೂಲಗಳಿಂದ ಮಾಹಿತಿ ಹೊರಬಿದ್ದಿದೆ. ಇತ್ತ ಉಕ್ರೇನ್ ಪ್ರತಿರೋಧ ಮತ್ತಷ್ಟು ತೀವ್ರಗೊಳಿಸಿದ್ದು, ರಷ್ಯಾದ 2 ಹೆಲಿಕಾಪ್ಟರ್‌ಗಳನ್ನು ಹೊಡೆದುರುಳಿಸಿದೆ. ಖೆರ್ಸನ್ ಬಳಿಯ ಒಬ್ಲಾಸ್ಟ್ ಸಮೀಪ ಹೆಲಿಕಾಫ್ಟರ್ ಧ್ವಂಸವಾಗಿದೆ. ಇದನ್ನೂ ಓದಿ: 122 ಮಾಜಿ ಸಂಸದರು, ಶಾಸಕರ ಭದ್ರತೆ ಹಿಂಪಡೆದ ಭಗವಂತ್ ಮಾನ್

ರಷ್ಯಾ ದಾಳಿಗೆ ಉಕ್ರೇನ್ ಪ್ರತಿರೋಧ ಒಡ್ಡುತ್ತಿರುವ ನಡುವೆಯೂ ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಮಾತುಕತೆಗೆ ಸಿದ್ಧ ಎಂದು ವೊಲೊಡಿಮಿರ್ ಝೆಲೆನ್ಸ್ಕಿ ಪುನರುಚ್ಚರಿಸಿದ್ದಾರೆ. ನಾವು ಮಾತುಕತೆಗೆ ಸಿದ್ಧ ಆದರೆ ನಾವು ತಿಳಿಸುವ ಸ್ಥಳಕ್ಕೆ ಪುಟಿನ್ ಬಂದರೆ ಮಾತ್ರ ಎಂದಿದ್ದಾರೆ. ಇದನ್ನೂ ಓದಿ: ರಷ್ಯಾ ಯೋಧರ ತಾಯಂದಿರ ಬಳಿ ಉಕ್ರೇನ್ ಅಧ್ಯಕ್ಷರ ಮನವಿ ಏನು ಗೊತ್ತಾ?

ಈಗಾಗಲೇ ಯುದ್ಧ ಪ್ರಾರಂಭವಾದಗಿನಿಂದ ಉಕ್ರೇನ್‍ನ 1,300ಕ್ಕೂ ಹೆಚ್ಚು ಉಕ್ರೇನ್ ಸೈನಿಕರು ಸಾವನ್ನಪ್ಪಿದ್ದಾರೆ. ಯುದ್ಧ ನಿಲ್ಲಿಸಲು ನಾವು ಸಿದ್ಧರಿದ್ದೇವೆ ಪುಟಿನ್ ಜೊತೆ ಮಾತುಕತೆಗೆ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಮಧ್ಯಸ್ಥಿಕೆ ವಹಿಸುವಂತೆ ಝೆಲೆನ್ಸ್ಕಿ ಮನವಿ ಮಾಡಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *