ನಾನು ಸಿಎಂ ಆಗಿದ್ದಿದ್ರೆ ʻಪಂಚ ಗ್ಯಾರಂಟಿʼ ಅನುಷ್ಠಾನ ಮಾಡ್ತಿರಲಿಲ್ಲ, ಗ್ಯಾರಂಟಿ ಹೊರೆಯಾಗಿದೆ: ಆರ್.ವಿ.ದೇಶಪಾಂಡೆ

Public TV
1 Min Read

– ಗ್ಯಾರಂಟಿಗಳಿಂದ ಅಭಿವೃದ್ಧಿಯ ವೇಗ ತಗ್ಗಿದೆ ಎಂದು `ಕೈʼ ಶಾಸಕ ಬೇಸರ

ಕಾರವಾರ: ನಾನು ಮುಖ್ಯಮಂತ್ರಿ ಆಗಿದ್ದಿದ್ರೆ ಪಂಚ ಗ್ಯಾರಂಟಿ ಯೋಜನೆಗಳನ್ನ (Congress Guarantee Scheme) ಅನುಷ್ಠಾನ ಮಾಡುತ್ತಿರಲಿಲ್ಲ ಎಂದು ಸ್ವಪಕ್ಷದ ಯೋಜನೆ ಬಗ್ಗೆ ಪಕ್ಷದ ಕಾರ್ಯಕ್ರಮದಲ್ಲೇ ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ ದೇಶಪಾಂಡೆ (RV Deshpande) ಹೇಳಿದ್ದಾರೆ.

ಉತ್ತರ ಕನ್ನಡ (Uttara Kannada) ಜಿಲ್ಲೆಯ ದಾಂಡೇಲಿ ತಾಲೂಕಿನ ಅಂಬೇವಾಡಿ ನವಗ್ರಾಮದಲ್ಲಿ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊರೆ ಆಗಿದೆ. ಜನರಿಗೆ ಅನುಕೂಲವಾಗಿರುವುದು ಒಂದೆಡೆಯಾದ್ರೆ, ಇನ್ನೊಂದೆಡೆ ಸರ್ಕಾರ ನಡೆಸಲು ಕಷ್ಟವಾಗಿದೆ.

ಮಹಿಳೆಯರು ಎಲ್ಲ ಸೌಲಭ್ಯಗಳನ್ನ ಪಡೆಯುತ್ತಿದ್ದಾರೆ. ಪುರುಷರಿಗೆ ಯಾವುದೇ ಯೋಜನೆಗಳು ಇಲ್ಲ. ಸರ್ಕಾರದ ಈ ಯೋಜನೆಗಳನ್ನ ಜನರಿಗೆ ತಲುಪಿಸಲು ಅನೇಕ ಸಮಿತಿಗಳನ್ನ ರಚಿಸಲಾಗಿದೆ. ಅವುಗಳನ್ನು ನಿಭಾಯಿಸುವುದೇ ಆಗಿದೆ. ಹೀಗಾಗಿ ರಾಜ್ಯದಲ್ಲಿ ಅಭಿವೃದ್ಧಿಯ ವೇಗ ತಗ್ಗಿದೆ ಎಂದು ಹೇಳಿದ್ದಾರೆ.

ಇನ್ನೂ 5 ಕೆಜಿ ಅಕ್ಕಿ ಬದಲಿಗೆ ಸರ್ಕಾರದಿಂದ ಇಂದಿರಾ ಕಿಟ್‌ (INDIRA Food Kit) ಕೊಡುವ ನಿರ್ಧಾರ ಕುರಿತು ಮಾತನಾಡ್ತಾ, ಮುಖ್ಯಮಂತ್ರಿಗಳು ಇಂದಿರಾ ಕಿಟ್ ಕೊಡ್ತಾರೋ ತೆಂಗಿನಕಾಯಿ ಕೊಡ್ತಾರೋ ನಮಗೇ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

Share This Article