500 ಕಾರುಗಳಲ್ಲಿ ಧರ್ಮಸ್ಥಳಕ್ಕೆ ಹೊರಟ ಬಿಜೆಪಿ ಕಾರ್ಯಕರ್ತರು!

Public TV
1 Min Read

ಬೆಂಗಳೂರು: ಶಾಸಕ ಎಸ್.ಆರ್ ವಿಶ್ವನಾಥ್ (S.R Vishwanath) ನೇತೃತ್ವದಲ್ಲಿ ಆ.16ರಂದು ಧರ್ಮಸ್ಥಳಕ್ಕೆ (Dharmasthala) 500 ಕಾರುಗಳಲ್ಲಿ ಬಿಜೆಪಿ (BJP) ಕಾರ್ಯಕರ್ತರು ಹೊರಡಲು ಸಿದ್ಧತೆ ನಡೆಸಿದ್ದಾರೆ.

ಯಲಹಂಕದಿಂದ (Yelahanka) ಶನಿವಾರ (ಆ.16) ಮುಂಜಾನೆ ಕಾರ್ಯಕರ್ತರು ಹೊರಡಲಿದ್ದಾರೆ. ನೂರಾರು ಜನ ಭಗವಾಧ್ವಜ ಹಿಡಿದು ಕೇಸರಿ ಶಾಲು ಧರಿಸಿ, ಧರ್ಮಸ್ಥಳಕ್ಕೆ ಹೊರಡಲಿದ್ದಾರೆ. ಪ್ರಯಾಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಮಧ್ಯಾಹ್ನ ಸುಮಾರು 3 ಗಂಟೆಗೆ ವಿಶ್ವನಾಥ್ ತಂಡ ಧರ್ಮಸ್ಥಳ ತಲುಪಲಿದೆ. ದೇವರ ದರ್ಶನ ಪಡೆದು ಧರ್ಮಸ್ಥಳದಲ್ಲೇ ಶನಿವಾರ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ. ಇದನ್ನೂ ಓದಿ: 13 ವರ್ಷದ ಹಿಂದೆ ಧರ್ಮಸ್ಥಳಕ್ಕೆ ಬಂದಿದ್ದ ನನ್ನ ತಂಗಿ ವಾಪಸ್‌ ಬರಲೇ ಇಲ್ಲ – ಎಸ್‌ಐಟಿಗೆ ದೂರು ನೀಡಿದ ಸಹೋದರ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ಶಾಸಕರ ನಿಯೋಗವೂ ಭಾನುವಾರ (ಆ.17) ಧರ್ಮಸ್ಥಳ ಭೇಟಿ ಮಾಡಲಿದೆ. ಉಡುಪಿ, ಮಂಗಳೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಬಿಜೆಪಿ ಶಾಸಕರು ನಿಯೋಗದಲ್ಲಿರಲಿದ್ದಾರೆ. ಬಿಜೆಪಿ ನಾಯಕರು ಧರ್ಮಾಧಿಕಾರಿಗಳನ್ನೂ ಭೇಟಿ ಮಾಡಿ ನೈತಿಕ ಬೆಂಬಲ ಸೂಚಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಧರ್ಮಸ್ಥಳ ದೇಗುಲದ ವಠಾರದಲ್ಲಿ ಸ್ಥಳ ಮಹಜರು

Share This Article