ಇಂದು ಮದ್ದೂರಿನಲ್ಲಿ ಬೃಹತ್ ಸಾಧನಾ ಸಮಾವೇಶ – 1,146.76 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ

Public TV
1 Min Read

ಮಂಡ್ಯ: ಇಂದು ಮಂಡ್ಯ (Mandya) ಜಿಲ್ಲೆಯ ಮದ್ದೂರಿನಲ್ಲಿ (Maddur) ವಿವಿಧ ಇಲಾಖೆಗಳ 1,146.76 ಕೋಟಿ ಅನುದಾನದ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ಇಂದು ಸಾಧನಾ ಸಮಾವೇಶಕ್ಕೆ (Sadhana Samavesha) ಪಟ್ಟಣ ಸಮೀಪದ ತಿಮ್ಮದಾಸ್ ಹೋಟೆಲ್ ಬಳಿ ಬೃಹತ್ ವೇದಿಕೆ ಸಜ್ಜಾಗಿದೆ.

ಶಿವಪುರ ಧ್ಜಜಸತ್ಯಾಗ್ರಹ ಸೌಧದ ಮಾದರಿಯಲ್ಲಿ ಆಕರ್ಷಕ ವೇದಿಕೆ ನಿರ್ಮಾಣಗೊಂಡಿದ್ದು, ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಕೃಷಿ, ತೋಟಗಾರಿಕೆ, ಶಿಕ್ಷಣ, ಸಮಾಜ ಕಲ್ಯಾಣ, ಕೌಶಲ್ಯಾಭಿವೃದ್ದಿ ಸೇರಿದಂತೆ ವಿವಿಧ ಇಲಾಖೆಗಳ ವಸ್ತುಪ್ರದರ್ಶನ ಮಳಿಗೆಯನ್ನು ತೆರೆಯಲಾಗುವುದು. ಇದನ್ನೂ ಓದಿ: UP | ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಕಾಲ್ತುಳಿತ – ಇಬ್ಬರು ಭಕ್ತರು ಸಾವು, 29 ಮಂದಿಗೆ ಗಾಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: Bengaluru | ರಸ್ತೆಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

16 ಇಲಾಖೆಗಳ 60 ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ 27 ಕಾಮಗಾರಿಗಳ ಉದ್ಘಾಟನೆ ಮಾಡಲಾಗಿದ್ದು, ಒಟ್ಟು 87 ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಲಿದೆ. ಈ ಮೂಲಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಲು ಕೈ ನಾಯಕರು ತಯಾರಿ ಮಾಡಿದ್ದಾರೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರ | ಲೋಕಸಭೆಯಲ್ಲಿಂದು 16 ಗಂಟೆಗಳ ಮ್ಯಾರಥಾನ್‌ ಚರ್ಚೆ, ಪ್ರಧಾನಿ ಮೋದಿ ಭಾಗಿ

Share This Article