ಸಾಗರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಸಾವು – ಮುಖ್ಯಸ್ಥ ಮಂಜಪ್ಪ ಅರೆಸ್ಟ್‌

Public TV
1 Min Read

ಶಿವಮೊಗ್ಗ: ಜಿಲ್ಲೆಯ ಸಾಗರದ (Sagara) ಖಾಸಗಿ ವಸತಿ ಶಾಲೆಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಕಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಸ್ಥ ಮಂಜಪ್ಪ (Manjappa) ಎಂಬುವರ ವಿರುದ್ದ ಪೊಲೀಸರು ಪೋಕ್ಸೋ ಕಾಯ್ದೆಯಡಿ (Pocso Case) ಪ್ರಕರಣ ದಾಖಲಿಸಿ ಅರೆಸ್ಟ್‌ ಮಾಡಿದ್ದಾರೆ.

ಖಾಸಗಿ ವಸತಿ ಶಾಲೆಯಲ್ಲಿ ಕಳೆದ ಮೂರು ದಿನದ ಹಿಂದೆ ನಡೆದಿದ್ದ 8ನೇ ತರಗತಿ ವಿದ್ಯಾರ್ಥಿನಿ ನಿಗೂಢವಾಗಿ ಸಾವನ್ನಪ್ಪಿದ್ದಳು. ವಿದ್ಯಾರ್ಥಿನಿ ಸಾವಿನ ಬಗ್ಗೆ ಪೋಷಕರು ಹಾಗೂ ಸಂಘ ಸಂಸ್ಥೆಯ ಮುಖಂಡರು ಅನುಮಾನ ವ್ಯಕ್ತಪಡಿಸಿದ್ದರು. ಘಟನೆ ಕುರಿತು ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು.  ಇದನ್ನೂ ಓದಿ: ಜಮ್ಮು-ಕಾಶ್ಮೀರದಿಂದ UPSC CAPF ತೇರ್ಗಡೆಯಾದ ಮೊದಲ ಮಹಿಳೆ ಸಿಮ್ರಾನ್‌ ಬಾಲಾ

ಶಾಲೆಯ ಸಂಸ್ಥಾಪಕ, ಮುಖ್ಯಸ್ಥ ಮಂಜಪ್ಪ ವಿರುದ್ದ ಪೋಕ್ಸೋ ಕಾಯ್ಸೆಯಡಿ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಗ ಪೊಲೀಸರು ಮಂಜಪ್ಪ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Share This Article