ಸಾಗರ್ ಶರ್ಮಾ ಇ-ರಿಕ್ಷಾ ಓಡಿಸುತ್ತಿದ್ದ: ಆರೋಪಿ ಮಗನ ಬಗ್ಗೆ ತಾಯಿ ಹೇಳಿದ್ದೇನು?

Public TV
2 Min Read

ನವದೆಹಲಿ: ಭದ್ರತಾ ಲೋಪದಿಂದ ಸಂಸತ್ ಭವನದಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಇಬ್ಬರು ಯುವಕರು ಏಕಾಏಕಿ ಬಂದು ಸ್ಮೋಕ್ ಬಾಂಬ್ (Smoke Bomb) ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರು ಸೇರಿ ಒಟ್ಟು 6 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಈ ಹಿನ್ನೆಲೆ ಆರೋಪಿಗಳ ಪೈಕಿ ಪ್ರಮುಖರಾದ ಸಾಗರ್ ಶರ್ಮಾ (Sagar Sharma) ಹಾಗೂ ಮೈಸೂರಿನ ಮನೋರಂಜನ್ ಕುರಿತು ತೀವ್ರ ತನಿಖೆ ನಡೆಯುತ್ತಿದೆ. ಈ ಕುರಿತು ಆರೋಪಿ ಸಾಗರ್ ಶರ್ಮಾ ತಾಯಿ ರಾಣಿ ಶರ್ಮಾ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದಾರೆ. ಸಾಗರ್ ಶರ್ಮಾ ಇ-ರಿಕ್ಷಾ (E-Rickshaw) ಓಡಿಸುತ್ತಿದ್ದ. ನಾವು ಕುಟುಂಬದಲ್ಲಿ ನಾಲ್ಕು ಜನರಿದ್ದೇವೆ. ನನ್ನ ಪತಿ ಕಾರ್ಪೆಂಟರ್ ಕೆಲಸ ಮಾಡುತ್ತಾರೆ. ಸಾಗರ್ ತನ್ನ ಸ್ನೇಹಿತರ ಜೊತೆ ಸ್ವಲ್ಪ ಕೆಲಸ ಇದೆ ಎಂದು ಹೇಳಿ ಎರಡು ದಿನಗಳ ಹಿಂದೆ ಮನೆಯಿಂದ ಹೋಗಿದ್ದಾನೆ ಎಂದರು. ಇದನ್ನೂ ಓದಿ: Security Breach in LokSabha- ಸಂಸತ್ ಒಳಗೆ, ಹೊರಗೆ ಇಂದು ಏನೇನಾಯ್ತು?

ಇನ್ನು ಈ ಕುರಿತು ಮಾತನಾಡಿದ ಎಸ್‌ಹೆಚ್‌ಒ, ಒಂದು ದಶಕದಿಂದ ಆರೋಪಿ ಸಾಗರ್ ಕುಟುಂಬವು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದೆ. ಶರ್ಮಾ ಇ-ರಿಕ್ಷಾ ಓಡಿಸುತ್ತಿದ್ದ ಎಂದು ತಿಳಿದುಬಂದಿದೆ ಎಂದು ಹೇಳಿದರು. ಅಲ್ಲದೇ ಲೋಕಸಭೆಯಲ್ಲಿ ನಡೆದ ಘಟನೆಯಲ್ಲಿ ಅವರು ಭಾಗಿಯಾಗಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. ನಾವು ಅವರಿಂದ ಮಾಹಿತಿ ಸಂಗ್ರಹಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ನಿರುದ್ಯೋಗದಿಂದ ಬೇಸತ್ತು ಸಾಯೋದೇ ಲೇಸು ಅನ್ನುತ್ತಿದ್ದಳು- ಸಂಸತ್ತಿನ ಹೊರಗಡೆ ಬಂಧಿಸಲ್ಪಟ್ಟವಳ ತಾಯಿ ಮಾತು

Share This Article