ಸಕಲೇಶಪುರ ವಲಯ ಅರಣ್ಯಾಧಿಕಾರಿ ಶಿಲ್ಪಾ ಎಸ್.ಎಲ್ ಅಮಾನತು

Public TV
1 Min Read

ಹಾಸನ: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ ಶಿಲ್ಪಾ ಎಸ್.ಎಲ್ (Shilpa SL) ಅಮಾನತು ಮಾಡಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜ್ ಕಿಶೋರ್ ಸಿಂಗ್ (Kishore Singh) ಆದೇಶ ಹೊರಡಿಸಿದ್ದಾರೆ.

ಸಿಬ್ಬಂದಿಯನ್ನು ನಿಯಂತ್ರಿಸುವಲ್ಲಿ, ಅರಣ್ಯ ಅಪರಾಧ ಪ್ರಕರಣಗಳ ತನಿಖೆ ನಡೆಸುವಲ್ಲಿ ವಿಫಲವಾಗಿರುವುದು, ಅವರಿಗೆ ನೀಡಿದ ಭೌತಿಕ ಹಾಗೂ ಆರ್ಥಿಕ ಪ್ರಗತಿಯನ್ನು ಸಾಧಿಸುವಲ್ಲಿ ವೈಫಲ್ಯ, ಸಾರ್ವಜನಿಕರೊಂದಿಗೆ ಸಮನ್ವಯ ಸಾಧಿಸಿಕೊಂಡು ಆನೆ ಮಾನವ ಸಂಘರ್ಷ ನಿಯಂತ್ರಿಸುವಲ್ಲಿ ವಿಫಲವಾಗಿರುವುದು, ಅಧಿಕಾರಿ, ಸಿಬ್ಬಂದಿ ವರ್ಗದವರ ನಡುವೆ ಭಿನ್ನಾಭಿಪ್ರಾಯ ಉಂಟಾಗಲು ಹಾಗೂ ವಿಭಾಗದ ಮತ್ತು ವಲಯದ ಆಡಳಿತಾತ್ಮಕ ತೊಡಕು ಉಂಟಾಗಲು ನೇರ ಕಾರಣಕರ್ತರಾಗಿದ್ದಾರೆ ಎಂದು ಅಮಾನತು (Suspension) ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್: ಡಿಕೆಶಿ ಘೋಷಣೆ

ಮೇಲಾಧಿಕಾರಿಗಳ ಯಾವುದೇ ಸೂಚನೆ ಹಾಗೂ ಆದೇಶ ಪತ್ರಗಳಿಗೂ ತಮ್ಮ ಕಾರ್ಯಶೈಲಿಯನ್ನು ತಿದ್ದುಕೊಳ್ಳದೆ ಇರುವುದು, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಮವಸ್ತ್ರಧಾರಿತಾದ ಅಧಿಕಾರಿಯವರು ಆಡಳಿತಾತ್ಮಕ ಗಂಭೀರ ವಿಷಯಗಳ ಬಗ್ಗೆ ಗಮನ ಹರಿಸದೇ ಬೇಜವಾಬ್ದಾರಿ ತೋರಿರುವುದು, ವಲಯ ಅರಣ್ಯಾಧಿಕಾರಿಗೆ ಇರುವ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ನಿರ್ವಹಿಸುವಲ್ಲಿ ವಿಫಲವಾಗಿದ್ದು, ಸರ್ಕಾರಿ ಸ್ವತ್ತನ್ನು ರಕ್ಷಣೆ ಮಾಡುವಲ್ಲಿ ವಿಫಲರಾಗಿ ಆರ್ಥಿಕ ನಷ್ಟ ಉಂಟು ಮಾಡಿದ್ದಾರೆ ಎಂದೂ ತಿಳಿಸಲಾಗಿದೆ.

ಕೇಂದ್ರ ಸ್ಥಾನದಲ್ಲಿದ್ದಲ್ಲಿ ಈ ಕರ್ತವ್ಯ ಲೋಪಗಳಿಗೆ ಸಂಬಂಧಿಸಿದ ಪೂರಕ ಸಾಕ್ಷ್ಯಗಳನ್ನು ನಾಶಪಡಿಸುವ ಸಾಧ್ಯತೆ ಇದ್ದು, ಪೂರಕ ಸರ್ಕಾರಿ ಪರ ಸಾಕ್ಷ್ಯಗಳಿಗೆ ಬೆದರಿಕೆ ಒಡ್ಡುವ ಸಾಧ್ಯತೆ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ಕೂಡಲೇ ಸಕಲೇಶಪುರ ವಲಯದ ಕರ್ತವ್ಯದಿಂದ ಅಮಾನತುಗೊಳಿಸಿ ಇವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ಶಿಫಾರಸು ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *