ನಾನು ಸಿಂಗಲ್‌, ಹೊಸ ಸಂಬಂಧಕ್ಕೆ ಸಿದ್ಧಳಾಗಿದ್ದೇನೆ ಎಂದು ಬ್ರೇಕಪ್‌ ಬಗ್ಗೆ ತಿಳಿಸಿದ ‘ಸಲಾರ್‌’ ನಟಿ

Public TV
1 Min Read

‘ಸಲಾರ್’ (Salaar) ಬೆಡಗಿ ಶ್ರುತಿ ಹಾಸನ್ (Shruti Hasaan) ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಇತ್ತೀಚೆಗೆ ಅವರ ಬ್ರೇಕಪ್ ಮ್ಯಾಟರ್ ಸಿಕ್ಕಾಪಟ್ಟೆ ಸುದ್ದಿಯಾಗಿತ್ತು. ಇದೀಗ ಮೊದಲ ಬಾರಿಗೆ ಶಾಂತನು ಜೊತೆಗಿನ ಬ್ರೇಕಪ್ ಬಗ್ಗೆ ನಟಿ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:‘ಮಾರಿಗೆ ದಾರಿ’ ಸಿನಿಮಾದ ಫಸ್ಟ್ ಲುಕ್ ಟೀಸರ್ ರಿಲೀಸ್

‘ಸಲಾರ್’ ನಟಿ ಶ್ರುತಿ ಅವರು ಶಾಂತನು ಹಜಾರಿಕಾ (Shantanu Hazarika) ಜೊತೆ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದರು. ಆದರೆ, ಇತ್ತೀಚೆಗೆ ಅವರ ಪ್ರೀತಿ ಬ್ರೇಕಪ್‌ನಲ್ಲಿ ಕೊನೆ ಆಗಿದೆ. ಈ ವಿಚಾರವನ್ನು ಅವರೇ ಅಧಿಕೃತ ಮಾಡಿದ್ದಾರೆ. ಬಹುದಿನಗಳ ನಂತರ ಸಾಮಾಜಿಕ ಜಾಲತಾಣದಲ್ಲಿ ‘ಆಸ್ಕ್ ಮಿ ಅನಿಥಿಂಗ್’ ಸೆಷನ್ ಅನ್ನು ಶ್ರುತಿ ಮಾಡಿದ್ದಾರೆ. ಈ ವೇಳೆ, ಅಭಿಮಾನಿಯೊಬ್ಬರು ಶ್ರುತಿಗೆ ಸಿಂಗಲ್ ಅಥವಾ ಕಮಿಟೆಡ್ ಎಂದು ಕೇಳಿದ್ದಾರೆ.

ನಾನು ಇಂತಹ ಪ್ರಶ್ನೆಗಳನ್ನು ಉತ್ತರಿಸಲು ಸಿದ್ಧವಾಗಿಲ್ಲ. ನಾನು ಸಿಂಗಲ್. ಹೊಸ ಸಂಬಂಧಕ್ಕೆ ಸಿದ್ಧಳಾಗಿದ್ದೇನೆ. ಸದ್ಯ ಕೆಲಸ ಮಾತ್ರ. ಜೀವನವನ್ನು ಎಂಜಾಯ್ ಮಾಡುತ್ತಿದ್ದೇನೆ ಎಂದು ‘ಸಲಾರ್’ ನಟಿ ಅಭಿಮಾನಿಯ ಪ್ರಶ್ನೆಗೆ ಉತ್ತರಿಸಿದ್ದಾರೆ. ಬ್ರೇಕಪ್ ಬಗ್ಗೆ ಪರೋಕ್ಷವಾಗಿ ನಟಿ ಹೇಳಿದ್ದಾರೆ.

ಶ್ರುತಿ ಹಾಸನ್ ನಟನೆಯ ಡಕಾಯಿಟ್, ಚೆನ್ನೈ ಸ್ಟೋರಿಸ್, ಸಲಾರ್ 2 ಸೇರಿದಂತೆ ಹಲವು ಸಿನಿಮಾಗಳು ಶ್ರುತಿ ಹಾಸನ್ ಕೈಯಲ್ಲಿವೆ.

Share This Article