ವಿಚ್ಛೇದನದ ಬಳಿಕ ಕುಗ್ಗಿಹೋಗಿ, ಸಾಯುವ ಹಂತ ತಲುಪುತ್ತೇನೆ ಎಂದುಕೊಂಡಿದ್ದೆ: ಸಮಂತಾ

Public TV
1 Min Read

– ನನ್ನ ಬಗ್ಗೆ ನನಗೆ ಹೆಮ್ಮೆ ಇದೆ. ಜೀವನದಲ್ಲಿ ಬಹಳ ಮುಂದೆ ಸಾಗಬೇಕಿದೆ

ಹೈದರಾಬಾದ್: ಟಾಲಿವುಡ್ ನಟಿ ಸಮಂತಾ ರುತ್ ಪ್ರಭು ಅವರು ನಾಗಚೈತನ್ಯ ಅವರಿಂದ ವಿಚ್ಛೇದನ ಪಡೆದಿರುವುದು ತಿಳಿದಿರು ವಿಚಾರವಾಗಿದೆ. ಈ ಕುರಿತಾಗಿ ಸಮಂತಾ ಮೊದಲಬಾರಿಗೆ ಮನಸ್ಸಿನ ಮಾತನ್ನು ಹಂಚಿಕೊಳ್ಳುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

ಫಿಲ್ಮ್ ಫೇರ್ ಸಂದರ್ಶನವೊಂದರಲ್ಲಿ ಸಮಂತಾ ನಾಗಚೈತನ್ಯರೊಂದಿಗೆ ಬೇರೆಯಾಗಿದ್ದರ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಜೀವನದಲ್ಲಿ ಕಷ್ಟದ ದಿನಗಳು ಬರುವುದು ಸಾಮಾನ್ಯ. ಅದನ್ನು ನಾವು ಧೈರ್ಯದಿಂದ ಎದುರಿಸಬೇಕು. ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿ ನಮಗೆ ಇರಬೇಕಾಗುತ್ತೆ. ನಾನು ನನ್ನನ್ನು ತುಂಬಾ ದುರ್ಬಲ ವ್ಯಕ್ತಿ ಎಂದು ಭಾವಿಸಿದ್ದೆ, ವಿಚ್ಛೇದನದ ಬಳಿಕ ಕುಗ್ಗಿಹೋಗಿ, ಸಾಯುವ ಹಂತ ತಲುಪುತ್ತೇನೆ ಎಂದುಕೊಂಡಿದ್ದೆ. ಆದರೆ ನನ್ನನ್ನು ನಾನು ಸಮರ್ಥವಾಗಿ ನಿಭಾಯಿಸಿಕೊಂಡಿದ್ದೇನೆ. ನನ್ನ ಮನಸ್ಥಿತಿ ಇಷ್ಟು ಬಲವಾಗಿದೆ ಎಂದು ಭಾವಿಸಿರಲಿಲ್ಲ. ನನ್ನ ಬಗ್ಗೆ ನನಗೆ ಹೆಮ್ಮೆ ಇದೆ. ಇನ್ನು ಜೀವನದಲ್ಲಿ ಬಹಳ ಮುಂದೆ ಸಾಗಬೇಕಿದೆ ಎಂದು ತಮ್ಮ ಮನದ ಮಾತನ್ನು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:  ಇನ್‍ಸ್ಟಾದಿಂದ ಮದುವೆ ಫೋಟೋ ಡಿಲೀಟ್ ಮಾಡಿದ ಸಮಂತಾ

ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಸಮಂತಾ ಹೆಸರಿನ ಜೊತೆಗೆ ಇರುವ ಅಕ್ಕಿನೇನಿ ಎಂದು ಇರುವುದುನ್ನು ತೆಗೆದ ಬೆನ್ನಲ್ಲೆ ಹಲವು ವಿವಾದಗಳು ಸೃಷ್ಟಿಯಾಗಿದ್ದವು. ಸಮಂತಾ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ವದಂತಿಗಳು ಹರಿದಾಡುತಿದ್ದ ನಡುವೆಯೇ ಸಾಮಾಜಿಕ ಜಾಲತಾಣದಲ್ಲಿ ವಿಚ್ಛೇದನದ ಕುರಿತು ಘೋಷಿಸಿದ್ದರು. ನಂತರ ಸಮಂತಾ, ನಾಗಚೈತನ್ಯ ಇಬ್ಬರು ವಿಚ್ಛೇದನದ ಕುರಿತಾಗಿ ಯಾವುದೇ ಹೇಳಿಕೆ ನೀಡಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಸಮಂತಾ ಮಾತನಾಡಿದ್ದಾರೆ. ಸಮಂತಾ ವಿಚ್ಛೇದದನದ ನಂತರ ಹಲವು ಸಿನಿಮಾಗಳಲ್ಲಿ ನಟಿಸುವ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ. ಇದನ್ನೂ ಓದಿ:   ನಾಗಚೈತನ್ಯ ನೆನಪುಗಳನ್ನು ಅಳಿಸಿ ಹಾಕಿದ ಸಮಂತಾ

Share This Article
Leave a Comment

Leave a Reply

Your email address will not be published. Required fields are marked *