ದಾಬೋಲ್ಕರ್ ಹತ್ಯೆ ಪ್ರಕರಣ: ಸನಾತನ ಸಂಸ್ಥೆ ವಕೀಲ ನ್ಯಾಯಾಂಗ ಬಂಧನಕ್ಕೆ

Public TV
1 Min Read

ಪುಣೆ: ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣದ ಆರೋಪಿ ಹಾಗೂ ಸನಾತನ ಸಂಸ್ಥಾದ ವಕೀಲ ಸಂಜೀವ್ ಪುನಲೇಕರ್ ಅವರನ್ನು ಪುಣೆ ನ್ಯಾಯಾಲಯ ಜುಲೈ 6ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ವಕೀಲ ಪುನಲೇಕರ್ ಅವರ ಲ್ಯಾಪ್‍ಟಾಪ್‍ನಲ್ಲಿ ಮಹತ್ವದ ದಾಖಲೆಗಳು ಸಿಕ್ಕಿದೆ. ಹೀಗಾಗಿ ಆರೋಪಿಯನ್ನು ವಿಚಾರಣೆ ನಡೆಸಲು ಕಸ್ಟಡಿಗೆ ನೀಡಬೇಕೆಂದು ಸಿಬಿಐ ಮನವಿ ಮಾಡಿತ್ತು. ಮನವಿಯ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶರಾದ ಆರ್.ಎಂ.ಪಾಂಡೆ ಅವರು ಜೂನ್ 23ರ ವರೆಗೆ ಸಿಬಿಐ ಕಸ್ಟಡಿಗೆ ನೀಡಿದ್ದರು.

ವಿಚಾರಣೆ ಪೂರ್ಣಗೊಳಿಸಿದ ಬಳಿಕ ಸಿಬಿಐ ಜೂನ್ 23 ರಂದು ಮತ್ತೆ ಪುನಲೇಕರ್ ಅವರನ್ನು ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಜುಲೈ 6ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.

ವಕೀಲ ಪುನಲೇಕರ್ ಹಾಗೂ ಈತನ ಸಹಚರ ವಿಕ್ರಮ್ ಭಾವೆಯನ್ನು ಮೇ 25ರಂದು ಸಿಬಿಐ ಬಂಧಿಸಿತ್ತು. ವಿಚಾರವಾದಿ ನರೇಂದ್ರ ದಾಬೋಲ್ಕರ್ ಅವರನ್ನು 2013ರ ಆ.20ರಂದು ಗುಂಡು ಹಾರಿಸಿ ಕೊಲೆ ಮಾಡಲಾಗಿತ್ತು.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

Share This Article
Leave a Comment

Leave a Reply

Your email address will not be published. Required fields are marked *