ಜೈಲಿನಲ್ಲಿರುವ ನಟ ದರ್ಶನ್‌ಗೆ ಜ್ವರ

By
0 Min Read

ರೇಣುಕಾಸ್ವಾಮಿ ಕೊಲೆ  (Renukaswamy Murder Case) ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಇದೀಗ ಜ್ವರದಿಂದ ಬಳಲುತ್ತಿದ್ದಾರೆ. ಅನಾರೋಗ್ಯದ ಹಿನ್ನೆಲೆ ಹಿರಿಯ ವೈದ್ಯರಿಂದ ದರ್ಶನ್‌ಗೆ (Darshan) ಜೈಲಿನಲ್ಲಿಯೇ ಚಿಕಿತ್ಸೆ ನೀಡಲಾಗಿದೆ. ಇದನ್ನೂ ಓದಿ:ದರ್ಶನ್ ಭೇಟಿಗೆ ಅವಕಾಶ ಸಿಗದೆ ಸಾಧುಕೋಕಿಲ ವಾಪಸ್

ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಕಳೆದ ಮೂರು ದಿನಗಳಿಂದ ಆರೋಗ್ಯ ಕೈಕೊಟ್ಟಿದೆ. ಜ್ವರದಿಂದ ಬಳಲುತ್ತಿದ್ದ ನಟನಿಗೆ ಜೈಲಿನ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ ಅಧಿಕಾರಿಗಳು.


ಸದ್ಯ ಚಿಕಿತ್ಸೆಯ ಬಳಿಕ ನಟನ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಈ ಸುದ್ದಿ ತಿಳಿದ ಫ್ಯಾನ್ಸ್ ಇದೀಗ ನಿರಾಳವಾಗಿದ್ದಾರೆ.

Share This Article