ಹಿರಿಯ ನಿರ್ದೇಶಕ ಕೆವಿ ರಾಜು ಇನ್ನಿಲ್ಲ

Public TV
1 Min Read

ಬೆಂಗಳೂರು: ಸ್ಯಾಂಡಲ್‍ವುಡ್‍ನ ಹಿರಿಯ ನಿರ್ದೇಶಕ ಕೆ.ವಿ ರಾಜು ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಕೆ.ವಿ ರಾಜು ಅವರು ಕೆಲವು ದಿನಗಳಿಂದ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೆ ರಾಜಾಜಿನಗರದ ನಿವಾಸದಲ್ಲಿ ಬೆಳಗ್ಗೆ 8 ಗಂಟೆಗೆ ನಿಧನರಾಗಿದ್ದಾರೆ.

ರಾಜಾಜಿನಗರದ ನಿವಾಸದಲ್ಲಿ ರಾಜು ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹರಿಶ್ಚಂದ್ರ ಘಾಟ್‍ನಲ್ಲಿ ಅಂತ್ಯ ಸಂಸ್ಕಾರ ಮಾಡುವ ಬಗ್ಗೆ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.  ಇದನ್ನೂ ಓದಿ:  ಗೋವು ನಮಗೆ ತಾಯಿ, ಪವಿತ್ರ: ನರೇಂದ್ರ ಮೋದಿ

ಹುಲಿಯಾ, ಬೆಳ್ಳಿ ಮೋಡಗಳು, ಇಂದ್ರಜಿತ್, ಬೆಳ್ಳಿ ಕಾಲುಂಗುರ, ಯುದ್ದಕಾಂಡ, ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ಸ್ಯಾಂಡಲ್‍ವುಡ್ ಮಾತ್ರವಲ್ಲದೇ ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ಚಿತ್ರಕ್ಕೂ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಸಾಲುಸಾಲು ಆಘಾತದಿಂದ ಕುಗ್ಗಿರುವ ಕನ್ನಡ ಚಿತ್ರರಂಗ, ಹಿರಿಯ ನಿರ್ದೇಶಕ, ಬರಹಗಾರ ರಾಜು ಅವರ ನಿಧನದಿಂದ ಮತ್ತಷ್ಟು ಬಡವಾಗಿದೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಮತಾಂತರ ತಡೆ ವಿಧೇಯಕ ಅಂಗೀಕಾರ

ಕೆ.ವಿ ರಾಜು ನಡೆದು ಬಂದ ಹಾದಿ: ಕೆ.ವಿ ರಾಜು ಅವರು ಚಿತ್ರರಂಗದಲ್ಲಿ ನಿರ್ದೇಶಕ, ಬರಹಗಾರ ಮತ್ತು ಚಿತ್ರಕಥೆಗಾರರಾಗಿ ಗುರುತಿಸಿಕೊಂಡಿದ್ದರು. ಖ್ಯಾತ ನಿರ್ದೇಶಕ ಕೆವಿ ಜಯರಾಮ್ ಅವರ ಸಹೋದರರಾಗಿದ್ದ ಕೆವಿ ರಾಜು, 1982 ರಲ್ಲಿ ‘ಬಾಡದ ಹೂ’ ಚಿತ್ರದಲ್ಲಿ ತಮ್ಮ ಸಹೋದರನಿಗೆ ಸಹಾಯಕ ನಿರ್ದೇಶಕರಾಗುವ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು.

1984 ರ ‘ಒಲವೇ ಬದುಕು’ ಮೂಲಕ ಅವರು ಬರಹಗಾರ ಹಾಗೂ ನಿರ್ದೇಶಕನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು. ಕೆಲವೇ ವರ್ಷಗಳಲ್ಲಿ ಚಿತ್ರರಂಗದ ಹಿಟ್ ನಿರ್ದೇಶಕರಾಗಿ ಅವರು ಜನಮೆಚ್ಚುಗೆ ಪಡೆದರು. ಸಂಗ್ರಾಮ (1987), ಬಂಧ ಮುಕ್ತ (1987), ಯುದ್ಧಕಾಂಡ (1989), ಬೆಳ್ಳಿ ಮೋಡಗಳು, ಬೆಳ್ಳಿ ಕಾಲುಂಗುರ, ಮುಂತಾದ ಚಿತ್ರಗಳ ಮೂಲಕ ಅವರು ಬ್ಲಾಕ್ ಬಸ್ಟರ್ ನಿರ್ದೇಶಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *