ಕಾವೇರಿ ಹೋರಾಟಕ್ಕೆ ಬಂದಿಲ್ಲ ಅಂದ್ರೆ ಸ್ವಾಭಿಮಾನಿಯಲ್ಲ ಅಂತಲ್ಲ: ನಟ ಜಗ್ಗೇಶ್

Public TV
2 Min Read

ಬೆಂಗಳೂರು: ಸೆಪ್ಟೆಂಬರ್‌ 29ರಂದು ಕರ್ನಾಟಕ ಬಂದ್‌ ಭಾಗವಾಗಿ ನಡೆದ ಕಾವೇರಿ ಹೋರಾಟ (Cauvery Protest) ಪ್ರತಿಭಟನಾ ಸಭೆಯಲ್ಲಿ ಗೈರಾಗಿದ್ದ ಬಿಜೆಪಿ ರಾಜ್ಯಸಭಾ ಸದಸ್ಯರೂ ಆಗಿರುವ ನಟ ಜಗ್ಗೇಶ್‌ (Jaggesh) ಅನಾರೋಗ್ಯದ ನಡುವೆಯೂ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.

ಇಂದು (ಶನಿವಾರ) ದಿಢೀರ್‌ ಸುದ್ದಿಗೋಷ್ಠಿ ನಡೆಸಿದ ಜಗ್ಗೇಶ್‌ ಅವರು, ಕಾವೇರಿ ಹೋರಾಟದ ಪ್ರತಿಭಟನಾ ಸಭೆಗೆ ಬಾರದೇ ಇದ್ದಿದ್ದಕ್ಕೆ ಕ್ಷಮೆ ಇರಲಿ. ಕಾವೇರಿ ಹೋರಾಟಕ್ಕೆ ಬಂದಿಲ್ಲ ಅಂದ್ರೆ ಸ್ವಾಭಿಮಾನಿಯಲ್ಲ ಅಂತಲ್ಲ. ಮೊದಲು ಅದರ ಇತಿಹಾಸ ಎಲ್ಲರೂ ಅರಿಯಬೇಕು ಎಂದು ಹೇಳಿದರು. ಇದನ್ನೂ ಓದಿ: Karnataka Bandh: ಎಲ್ಲ ರಾಜ್ಯದ ರೈತರೂ ಒಂದೇ, ಸರಕಾರಗಳು ಕೂತು ಮಾತನಾಡಲಿ : ನಟ ಶಿವಣ್ಣ

ಮಹಾರಾಜರು ಆಗ ನದಿಗೆ ಅಡ್ಡಲಾಗಿ ಚೆಕ್ ಪಾಯಿಂಟ್‌ ನಿರ್ಮಿಸಿದ್ದರು. ಕೊನೆಗೆ ಡ್ಯಾಮ್‌ ಕಟ್ಟಲು ಬಂದಾಗ ತಡೆಯಲು ಬಂದಿದ್ದರು. ಮೆಟ್ಟೂರು ಡ್ಯಾಂ 6 ವರ್ಷದಲ್ಲಿ ಕಟ್ಟಿಕೊಂಡರು. ಆದ್ರೆ ನಮಗೆ 20 ವರ್ಷ ಬೇಕಾಯಿತು. ಕಾವೇರಿ ಹುಟ್ಟೋದು ಕರ್ನಾಟಕದಲ್ಲೇ, ಹರಿಯೋದು ಕರ್ನಾಟಕದಲ್ಲೇ, ಆದ್ರೆ ಬಳಕೆ ಮಾತ್ರ ಅವರದ್ದು ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಒಂದು ಹನಿ ನೀರು ಬಿಡದೇ ಇರುವ ಹಾಗೆ ಮಾಡೋಕೆ ಕನ್ನಡಿಗರಿಗೆ ಶಕ್ತಿ ಇದೆ- ಪೂಜಾ ಗಾಂಧಿ

ನಟ ಜಗ್ಗೇಶ್ ಅವರು CT ಸ್ಕ್ಯಾನ್ ಮಾಡಿಸುತ್ತಿದ್ದ ಕೆಲವು ಚಿತ್ರಗಳನ್ನ ನಿನ್ನೆ (ಶುಕ್ರವಾರ) ಟ್ಟಿಟ್ಟರ್‌ನಲ್ಲಿ ಹಂಚಿಕೊಂಡು ತಮ್ಮ ಆರೋಗ್ಯ ಸ್ಥಿತಿ (Jaggesh Health Condition) ಕುರಿತು ಮಾಹಿತಿ ಹಂಚಿಕೊಂಡಿದ್ದರು. ಇತ್ತೀಚೆಗೆ ಕೇದಾರ್​ನಾಥ-ಬದ್ರಿನಾಥ​ ಯಾತ್ರೆಗೆ ಜಗ್ಗೇಶ್ ತೆರಳಿದ್ದರು. ಅಲ್ಲಿ ಬೆಟ್ಟ ಹತ್ತಿ ಇಳಿದ ಕಾರಣ ಹಾಗೂ ಸತತ ಪ್ರಯಾಣ, ನಡೆದಾಟದಿಂದ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಬೆನ್ನು ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಜಗ್ಗೇಶ್ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ಸಿಟಿಸ್ಕ್ಯಾನ್​ಗೆ ಒಳಗಾಗಿದ್ದರು. ಇದನ್ನೂ ಓದಿ: ಈವರೆಗೂ ಪರಿಹಾರ ಸಿಗದೇ ಇರೋ ಏಕೈಕ ಸಮಸ್ಯೆ ಕಾವೇರಿಯದ್ದು: ನಟ ಉಪೇಂದ್ರ

ತಾವು ಸಿಟಿಸ್ಕ್ಯಾನ್​ಗೆ ಒಳಗಾಗುತ್ತಿರುವ ಚಿತ್ರವನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದ ಜಗ್ಗೇಶ್, L4L5 ಕಂಪ್ರೆಷನ್ ಆಗಿ ನಡೆದಾಡಲು ಕಷ್ಟವಾಗಿ ಯಾವ ಕಾರ್ಯದಲ್ಲೂ ಭಾಗಿಯಾಗಲು ಸಾಧ್ಯವಾಗಲಿಲ್ಲ. 2 ವಾರ ಫಿಸಿಯೋ ಚಿಕಿತ್ಸೆ ಹಾಗೂ ಬೆಡ್​ರೆಸ್ಟ್ ಕಡ್ಡಾಯ ಎಂದು ವೈದ್ಯರು ಸಲಹೆ ನೀಡಿದ್ದಾರೆ ಎಂದು ನಟ ಬರೆದುಕೊಂಡಿದ್ದರು. ಇದನ್ನೂ ಓದಿ: ನಮಗೆ ನೀರಿಲ್ಲ, ತಮಿಳುನಾಡಿಗೆ ನೀರು ಬಿಡುವುದು ಹೇಗೆ- ನಟ ಶ್ರೀನಾಥ್

ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದ ಜಗ್ಗೇಶ್‌ ಅವರು ಶುಕ್ರವಾರ ದೆಹಲಿಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ಶುಕ್ರವಾರ ತಡರಾತ್ರಿಯೇ ಬೆಂಗಳೂರಿಗೆ ಆಗಮಿಸಿದ್ದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್