ಕ್ಷೇತ್ರಪತಿ ಚಿತ್ರದ ಟೀಸರ್ ಮೆಚ್ಚಿಕೊಂಡ ಸ್ಯಾಂಡಲ್ ವುಡ್

Public TV
1 Min Read

ಗುಲ್ಟು ಚಿತ್ರದ ಮೂಲಕ ಜನಪ್ರಿಯರಾಗಿ, ಹೊಂದಿಸಿ ಬರೆಯಿರಿ, ಹೊಯ್ಸಳ ಚಿತ್ರಗಳ ಮೂಲಕ ಅಪಾರ ಜನಮನ್ನಣೆ ಪಡೆದಿರುವ ನಟ ನವೀನ್ ಶಂಕರ್. ಪ್ರಸ್ತುತ ನವೀನ್ ಶಂಕರ್  ‘ಕ್ಷೇತ್ರಪತಿ’ (Kshetrapati) ಚಿತ್ರದಲ್ಲೂ ನಾಯಕರಾಗಿ ನಟಿಸಿದ್ದು, ಈ ಚಿತ್ರದ ಟೀಸರ್ (Teaser) ಬಿಡುಗಡೆಯಾಗಿದೆ. ಈ ಚಿತ್ರದ ನವೀನ್ ಶಂಕರ್ (Naveen Shankar) ಅವರ ಲುಕ್ ಗೆ ಹಾಗೂ ಟೀಸರ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಕ್ಷೇತ್ರಪತಿ ಪೊಲಿಟಿಕಲ್ ಡ್ರಾಮಾ ಕಥಾಹಂದರ ಹೊಂದಿದೆ. ಶ್ರೀಕಾಂತ್ ಕಟಗಿ (Srikanth Katagi) ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆ. ಹಾಗಾಗಿ ಹೆಚ್ಚಿನ ಭಾಗದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆದಿದೆ‌. ಇದನ್ನೂ ಓದಿ:ಸೋದರಳಿಯನ ಸಿನಿಮಾಗೆ ಕ್ಲ್ಯಾಪ್ ಮಾಡಿ ಶುಭಕೋರಿದ ಕಿಚ್ಚ ಸುದೀಪ್

ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ವೈ ವಿ ಬಿ ಶಿವಸಾಗರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಜೀವನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಈ ಹಿಂದೆ ಹೊಂದಿಸಿ ಬರೆಯಿರಿ ಚಿತ್ರದಲ್ಲಿ ನಾಯಕ-ನಾಯಕಿಯಾಗಿ ನಟಿಸಿ, ಜನಮನ ಗೆದ್ದಿರುವ,  ನವೀನ್ ಶಂಕರ್ ಹಾಗೂ ಅರ್ಚನಾ ಜೋಯಿಸ್ ಕ್ಷೇತ್ರಪತಿ ಚಿತ್ರದಲ್ಲೂ ನಾಯಕ – ನಾಯಕಿಯಾಗಿ ನಟಿಸಿದ್ದಾರೆ.  ಅಚ್ಯುತ್ ಕುಮಾರ್, ರಾಹುಲ್ ಐನಾಪುರ, ಕೃಷ್ಣ ಹೆಬ್ಬಾಳೆ, ಶೈಲಶ್ರೀ ಅರಸ್, ನಾಟ್ಯ ರಂಗ, ಹರ್ಷ ಅರ್ಜುನ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Share This Article