ಬೆಂಗಳೂರು: ಸ್ಯಾಂಡಲ್‍ವುಡ್ ಹಿರಿಯ ನಿರ್ದೇಶಕ, ನಿರ್ಮಾಪಕ ಕಟ್ಟೆ ರಾಮಚಂದ್ರ(75) ಅವರು ಕೊರೊನಾದಿಂದ ನಿಧನರಾಗಿದ್ದಾರೆ.
ಹಲವು ದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕಟ್ಟೆ ರಾಮಚಂದ್ರ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದಷ್ಟೇ ಕಟ್ಟೆ ರಾಮಚಂದ್ರ ಅವರ ಪತ್ನಿ ನಿಧನರಾಗಿದ್ದರು. ಇದನ್ನೂ ಓದಿ: ಕೇರಳದ ಬಾಲಿಕಾ ಗೃಹದಿಂದ 6 ಹುಡುಗಿಯರು ನಾಪತ್ತೆ – ಒಬ್ಬಳು ಬೆಂಗ್ಳೂರಿನಲ್ಲಿ ಪತ್ತೆ
ಅರಿವು ಮತ್ತು ಡಾ. ವಿಷ್ಣುವರ್ಧನ್ ಅವರು ಅಭಿನಯದ ವೈಶಾಖದ ದಿನಗಳು ಎಂಬ ಚಿತ್ರಗಳನ್ನು ಕಟ್ಟೆ ರಾಮಚಂದ್ರ ಅವರು ನಿರ್ಮಾಣ ಮಾಡಿದ್ದರು. ಅಲ್ಲದೇ ಮನೆ ಮನೆ ಕಥೆ, ಅಲೆಗಳು ಎಂಬ ಧಾರವಾಹಿಯಲ್ಲಿ ನಟಿಸಿದ್ದರು. ತನು ನಿನ್ನದು ಮನ ನಿನ್ನದು ಎಂಬ ಧಾರಾವಾಹಿಯನ್ನು ನಿರ್ದೇಶನ-ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ: 3 ವರ್ಷದ ಮಗು ಮೇಲೆ 30ರ ಕಾಮಿಯಿಂದ ಅತ್ಯಾಚಾರಕ್ಕೆ ಯತ್ನ