ಯುವರಾಜ್‌ಕುಮಾರ್‌ಗೆ ಜೊತೆಯಾದ ‘ಸಲಗ’ ಖ್ಯಾತಿಯ ಸಂಜನಾ ಆನಂದ್

Public TV
1 Min Read

ದೊಡ್ಮನೆ ಕುಡಿ ಯುವರಾಜ್‌ಕುಮಾರ್ (Yuva Rajkumar) ಅವರು ‘ಯುವ’ ಸಿನಿಮಾ ಬಳಿಕ ಎರಡನೇ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ‘ಎಕ್ಕ’ ಸಿನಿಮಾದಲ್ಲಿ ಯುವಗೆ ನಾಯಕಿ ಯಾರು? ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ. ‘ಸಲಗ’ ಬ್ಯೂಟಿ ಸಂಜನಾ ಆನಂದ್ (Sanjana Anand) ಹೀರೋಯಿನ್ ಆಗಿದ್ದಾರೆ.

‘ಎಕ್ಕ’ ಸಿನಿಮಾ ಶೂಟಿಂಗ್ ಭರದಿಂದ ನಡೆಯುತ್ತಿದೆ. ಈಗಾಗಲೇ ಯುವನ ರಕ್ತಸಿಕ್ತ ಅವತಾರದ ಪೋಸ್ಟರ್ ನೋಡಿ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಹೀಗಿರುವಾಗ ‘ಎಕ್ಕ’ (Ekka) ಅಡ್ಡಾಗೆ ನಾಯಕಿಯಾಗಿ ‘ಸಲಗ’ ನಟಿ ಸಂಜನಾ ಎಂಟ್ರಿ ಕೊಟ್ಟಿದ್ದಾರೆ. ಯುವ ಮತ್ತು ಸಂಜನಾ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿರುವ ಪೋಸ್ಟರ್ ಅನ್ನು ಸಂಕ್ರಾಂತಿ ಹಬ್ಬದಂದು ಚಿತ್ರತಂಡ ರಿವೀಲ್ ಮಾಡಿದೆ. ‘ತೊದಲು ಪ್ರೀತಿಯ ಮೊದಲ ಪರಿಚಯ’ ಎಂದು ಪೋಸ್ಟರ್‌ಗೆ ಅಡಿಬರಹ ನೀಡಿದ್ದಾರೆ.

ಇನ್ನೂ ರೋಹಿತ್ ಪದಕಿ ನಿರ್ದೇಶನದ ‘ಎಕ್ಕ’ ಒಬ್ಬ ಯುವಕನ ಕಥೆಯನ್ನು ಹೇಳುತ್ತದೆ. ಒಬ್ಬ ಮನುಷ್ಯನು ಭೂಗತ ಲೋಕಕ್ಕೆ ತುತ್ತಾದಾಗ, ಆತನಿಗೆ ಆಗುವ ಅನುಭವಗಳನ್ನು ಹೇಳುವ ಕಥೆಯೇ ‘ಎಕ್ಕ’ ಸಿನಿಮಾ. ‘ಎಕ್ಕ’ ಚಿತ್ರದಲ್ಲಿ ಯುವ ರಾಜ್ ಕುಮಾರ್, ಸಂಪದಾ, ಅತ್ತುಲ್ ಕುಲಕರ್ಣೀ, ಶ್ರುತಿ ಕೃಷ್ಣ, ರಾಹುಲ್ ದೇವ್ ಶೆಟ್ಟಿ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಿಕಥೆಯನ್ನು ರೋಹಿತ್ ಪದಕಿ ಮತ್ತು ವಿಕ್ರಮ್ ಹತ್ವಾರ್ ರಚಿಸಿದ್ದಾರೆ.

ಈ ಚಿತ್ರವನ್ನು ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಪಿ.ಆರ್.ಕೆ ಪ್ರೊಡಕ್ಷನ್ಸ್ ಲಾಂಛನದಡಿಯಲ್ಲಿ, ಜಯಣ್ಣ ಮತ್ತು ಭೋಗೇಂದ್ರ ಜಯಣ್ಣ ಫಿಲಂಸ್ ಲಾಂಛನದಡಿಯಲ್ಲಿ ಹಾಗು ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ಕೆ.ಆರ್.ಜಿ.ಸ್ಟುಡಿಯೋಸ್ ಲಾಂಛನದಡಿಯಲ್ಲಿ ನಿರ್ಮಿಸಲ್ಲಿದ್ದಾರೆ. ಈ ಚಿತ್ರವು ಈ ವರ್ಷ ಜೂನ್ 6ರಂದು ರಿಲೀಸ್‌ ಆಗಲಿದೆ.

Share This Article