ನವದೆಹಲಿ: ಬ್ರಿಟನ್ ಮೂಲದ ಶಸ್ತ್ರಾಸ್ತ್ರ ಸಲಹೆಗಾರ ಸಂಜಯ್ ಭಂಡಾರಿಯನ್ನು (Sanjay Bhandari) ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಲಾಗಿದೆ. ಜಾರಿ ನಿರ್ದೇಶನಾಲಯದ (ED) ಮನವಿಯ ಮೇರೆಗೆ ದೆಹಲಿ ವಿಶೇಷ ನ್ಯಾಯಾಲಯ (Delhi Special Court) ಇಂದು ಆದೇಶ ಹೊರಡಿಸಿದೆ.
ಸಂಜಯ್ ಭಂಡಾರಿ, ಬ್ರಿಟನ್‌ನಲ್ಲಿ ನೆಲೆಸಿರುವ ಶಸ್ತ್ರಾಸ್ತ್ರ ಸಲಹೆಗಾರ (Arms Consultant), 2016ರಲ್ಲಿ ಭಾರತದಿಂದ ಬ್ರಿಟನ್‌ಗೆ ಪರಾರಿಯಾದವರು ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. 2015ರ ಕಪ್ಪುಹಣ ತಡೆ ಕಾಯ್ದೆಯಡಿ ಆದಾಯ ತೆರಿಗೆ ಇಲಾಖೆ ದಾಖಲಿಸಿದ ಆರೋಪಪಟ್ಟಿಯನ್ನು ಆಧರಿಸಿ, ಇಡಿಯು 2017ರ ಫೆಬ್ರವರಿಯಲ್ಲಿ ಭಂಡಾರಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿತು. 2020ರಲ್ಲಿ ಇಡಿ ಆರೋಪಪಟ್ಟಿಯನ್ನು ಸಹ ಸಲ್ಲಿಸಿತು. ಇದನ್ನೂ ಓದಿ: ರಶ್ಮಿಕಾ ಬೈ ಮಿಸ್ ಆಗಿ ಹೇಳಿರಬೇಕು, ಕ್ಷಮಿಸಿಬಿಡೋಣ: ನಟಿ ಹರ್ಷಿಕಾ ಪೂಣಚ್ಚ
ಇಡಿಯ ಪ್ರಕಾರ, ಭಂಡಾರಿಯು 100 ಕೋಟಿ ರೂ.ಗಿಂತಲೂ ಹೆಚ್ಚಿನ ಮೌಲ್ಯದ ವಿದೇಶಿ ಆಸ್ತಿಗಳನ್ನು ಹೊಂದಿದ್ದಾನೆ. ಇವುಗಳನ್ನು ಆದಾಯ ತೆರಿಗೆ ಇಲಾಖೆಗೆ ಬಹಿರಂಗಪಡಿಸದೇ ಅಕ್ರಮವಾಗಿ ಸಂಪಾದಿಸಿದ್ದಾನೆ ಎಂದು ಆರೋಪಿಸಲಾಗಿದೆ. ಭಂಡಾರಿಯು ಭಾರತದ ಕಾನೂನು ಪ್ರಕ್ರಿಯೆಯಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಂಡಿದ್ದಾನೆ ಎಂದು ಇಡಿ ವಾದಿಸಿತ್ತು. ಇದನ್ನೂ ಓದಿ: ಸೈನಿಕರಿಗೆ ಅಂಗವೈಕಲ್ಯ ಪಿಂಚಣಿ ನೀಡುವುದು ಔದಾರ್ಯಕ್ಕಲ್ಲ, ರಾಷ್ಟ್ರಕ್ಕಾಗಿ ಮಾಡಿದ ಸೇವೆಗೆ – ದೆಹಲಿ ಹೈಕೋರ್ಟ್
ಭಾರತ ಸರ್ಕಾರವು ಭಂಡಾರಿಯನ್ನು ಭಾರತಕ್ಕೆ ಹಸ್ತಾಂತರ ಮಾಡುವಂತೆ ಬ್ರಿಟನ್‌ಗೆ ಮನವಿ ಸಲ್ಲಿಸಿತ್ತು. ಆದರೆ, ಅಲ್ಲಿಯ ನ್ಯಾಯಾಲಯವು ಈ ಮನವಿಯನ್ನು ತಿರಸ್ಕರಿಸಿತು. ಇದರ ಬೆನ್ನಲೆ ದೆಹಲಿ ವಿಶೇಷ ನ್ಯಾಯಲಯ ಪರಾರಿಯಾದ ಆರ್ಥಿಕ ಅಪರಾಧಿ (Economic Offender) ಎಂದು ಘೋಷಿಸಿದ್ದು, ಭಂಡಾರಿಯ ಆಸ್ತಿಗಳನ್ನು ಮುಟ್ಟುಗೋಲಿಗೆ ಒಳಪಡಿಸಲು ಮತ್ತು ಕಾನೂನು ಕ್ರಮಕ್ಕೆ ಒಳಪಡಿಸಲು ಭಾರತ ಸರ್ಕಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಅಮರನಾಥ ಯಾತ್ರೆಗೆ ತೆರಳುತ್ತಿದ್ದ 5 ಬಸ್‌ಗಳ ನಡುವೆ ಸರಣಿ ಅಪಘಾತ – 30ಕ್ಕೂ ಹೆಚ್ಚು ಮಂದಿಗೆ ಗಾಯ