ಧ್ರುವ ಸರ್ಜಾ ಮಕ್ಕಳ ನಾಮಕರಣದಲ್ಲಿ ಭಾಗಿಯಾದ ಸಂಜಯ್ ದತ್

Public TV
1 Min Read

ನ್ನಡದ ಹೆಸರಾಂತ ನಟ ಧ್ರುವ ಸರ್ಜಾ (Dhruva Sarja) ಇಂದು ತಮ್ಮ ಇಬ್ಬರು ಮಕ್ಕಳ ನಾಮಕರಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಮಕ್ಕಳ ನಾಮಕರಣ ಸಮಾರಂಭಕ್ಕೆ ಸಾಕ್ಷಿಯಾಗಲು ಬಾಲಿವುಡ್ ನಿಂದ ಸಂಜಯ್ ದತ್ (Sanjay Dutt) ಆಗಮಿಸಿದ್ದರು. ಸಂಜಯ್ ಮತ್ತು ಧ್ರುವ ಕೆಡಿ ಸಿನಿಮಾದಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ.

ಅಯೋಧ್ಯೆಯಲ್ಲಿ ಬಾಲರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಿರುವ ಈ ಹೊತ್ತಿನಲ್ಲಿ ನಟ ಧ್ರುವ ಸರ್ಜಾ ತಮ್ಮ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ್ದಾರೆ. ಮಗಳಿಗೆ ರುದ್ರಾಕ್ಷಿ ಮತ್ತು ಮಗನಿಗೆ ಹಯಗ್ರೀವ ಎಂದು ನಾಮಕರಣ ಮಾಡಿದ್ದಾರೆ. ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ನಾಮಕರಣ ಶಾಸ್ತ್ರ ನಡೆದಿದೆ.

ಅಯೋಧ್ಯೆ ಬಾ;ಲರಾಮ ಪ್ರಾಣ ಪ್ರತಿಷ್ಠಾಪನೆ ವೇಳೆಯೇ ನಾಮಕರಣ ಶಾಸ್ತ್ರ ನಡೆದಿದ್ದು, ಮಕ್ಕಳಿಗೆ ವಿಶೇಷ ಮತ್ತು ಅರ್ಥಪೂರ್ಣವಾದ ಹೆಸರನ್ನೇ  ಇಟ್ಟಿದ್ದಾರೆ ಧ್ರುವ ಸರ್ಜಾ. ಧ್ರುವ ಸರ್ಜಾ ಅಂಡ್ ಫ್ಯಾಮಿಲಿ ಆಂಜನೇಯನ ಭಕ್ತರು. ಆಂಜನೇಯ ಗುಡಿಯನ್ನೇ ಈ ಕುಟುಂಬ ನಿರ್ಮಾಣ ಮಾಡಿದೆ. ಧ್ರುವ ಸಿನಿಮಾದಲ್ಲಿ ಹನುಮನ ಕುರಿತಾಗಿ ಸನ್ನಿವೇಶವೋ, ಹಾಡೋ ಇದ್ದೇ ಇರುತ್ತದೆ. ಹನುಮನ ಉಸಿರಾಗಿರುವ ರಾಮನ ಮಂದಿರ ಉದ್ಘಾಟನೆ ದಿನದಂದು ತಮ್ಮ ಪುತ್ರಿ ಹಾಗೂ ಪುತ್ರನಿಗೆ ನಾಮಕರಣ ಮಾಡಿದ್ದು ವಿಶೇಷ.

 

ಇಂದು ಧ್ರುವ ಸರ್ಜಾ ಮಕ್ಕಳಿಗೆ ನಾಮಕರಣ ಮಾಡಿದ್ದರೆ, ಅನೇಕ ಮಹಿಳೆಯರು ಇಂದೇ ಹೆರಿಗೆ ಮಾಡಿಸುವಂತೆ ವೈದ್ಯರ ದುಂಬಾಲು ಬಿದ್ದಿರುವ ಘಟನೆಗಳು ನಡೆದಿವೆ. ರಾಮ ಮಂದಿರ ಉದ್ಘಾಟನೆ ದಿನವೇ ಹೆರಿಗೆ ಮಾಡಿಸಿಕೊಳ್ಳಲು ಹಲವರು ತಯಾರಿ ಕೂಡ ಮಾಡಿಕೊಂಡಿದ್ದರು. ಅಷ್ಟರ ಮಟ್ಟಿಗೆ ರಾಮ ಜನರ ಮನಸ್ಸಲ್ಲಿ ಬೇರೂರಿದ್ದಾನೆ.

Share This Article