IPL 2026 | ಸಂಜು ಸ್ಯಾಮ್ಸನ್‌ ಆರ್‌ಸಿಬಿ ಸೇರೋದು ಪಕ್ಕಾನಾ?

Public TV
2 Min Read

ಮುಂಬೈ: ರಾಜಸ್ಥಾನ್‌ ರಾಯಲ್ಸ್ (Rajasthan Royals) ಜೊತೆಗಿನ ಸಂಬಂಧ ಹದಗೆಟ್ಟಿರುವುದರಿಂದ ಸಂಜು ಸ್ಯಾಮ್ಸನ್ ಅವರು 2026ರ ಐಪಿಎಲ್‌ ಮಿನಿ ಹರಾಜಿಗೂ ಮುನ್ನವೇ ಫ್ರಾಂಚೈಸಿಯಿಂದ ಹೊರಬರಲು ಇಚ್ಛಿಸಿದ್ದಾರೆ. ಈ ಬೆನ್ನಲ್ಲೇ ವೈರಲ್‌ ಆಗಿರುವ ಫೋಟೋಗಳು ಸಂಜು ಸ್ಯಾಮ್ಸನ್‌ (Sanju Samson) ಆರ್‌ಸಿಬಿ ಸೇರೋದು ಪಕ್ಕಾ ಎಂದು ಹೇಳುತ್ತಿವೆ.

ಹೌದು. 2026ರ ಐಪಿಎಲ್‌ಗೆ (IPL 2025) ಮುಂಚಿತವಾಗಿ ನಡೆಯಲಿರುವ ಮಿನಿ ಹರಾಜಿಗೂ ಮುನ್ನ ತಮ್ಮನ್ನು ಫ್ರಾಂಚೈಸಿಯಿಂದ ಬಿಡುಗಡೆಗೊಳಿಸುವಂತೆ ಕೇಳಿಕೊಂಡಿದಾರಂತೆ. ಈ ಬೆನ್ನಲ್ಲೇ ಸಂಜು ಆರ್‌ಸಿಬಿ (RCB) ಥ್ರೋ ಡೌನ್ ಸ್ಪೆಷಲಿಸ್ಟ್ ಜೊತೆ ತರಬೇತಿ ಪಡೆಯುತ್ತಿರುವ ಫೋಟೋಗಳು ವೈರಲ್‌ ಆಗಿದ್ದು, ಭಾರೀ ಹೈಪ್‌ ಕ್ರಿಯೆಟ್‌ ಮಾಡಿದೆ.

ಕಳೆದ ತಿಂಗಳು ಮುಕ್ತಾಯಗೊಂಡ ಟಿ20 ಏಷ್ಯಾಕಪ್‌ (T20 Asia Cup) ಟೂರ್ನಿಯಲ್ಲಿ ಸಂಜು ಸ್ಯಾಮ್ಸನ್‌ ಮೊದಲ ಆಯ್ಕೆಯ ವಿಕೆಟ್‌ ಕೀಪರ್‌ ಬ್ಯಾಟರ್‌ ಆಗಿದ್ದರು. ಅಲ್ಲದೇ ಅಕ್ಟೋಬರ್‌ 29ರಿಂದ ಶುರುವಾಗಲಿರುವ 5 ಪಂದ್ಯಗಳ ಟಿ20 ಸರಣಿಗೆ ಆಯ್ಕೆಯಾಗಿದ್ದು, ಆಸ್ಟ್ರೇಲಿಯಾಗೆ (Australia) ಪ್ರಯಾಣಿಸಲಿದ್ದಾರೆ. ಅದಕ್ಕೂ ಮುನ್ನ ಸಂಜು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಥ್ರೋ-ಡೌನ್ ಸ್ಪೆಷಲಿಸ್ಟ್ ಗೇಬ್ರಿಯಲ್ ಅವರಿಂದಿಗೆ ತರಬೇತಿ ಪಡೆಯುತ್ತಿದ್ದಾರೆ. ಈ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಸ್ಯಾಮ್ಸನ್‌ ಆರ್‌ಆರ್‌ ತೊರೆಯಲು ಕಾರಣ ಏನು?
ರಾಜಸ್ಥಾನ್‌ ರಾಯಲ್ಸ್‌ ತಂಡದ ನಾಯಕನಾಗಿದ್ದ ಸಂಜು ಸ್ಯಾಮ್ಸನ್‌ 2025ರ ಐಪಿಎಲ್‌ ಟೂರ್ನಿಯ ಬಹುತೇಕ ಪಂದ್ಯಗಳಲ್ಲಿ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಕಣಕ್ಕಿಳಿದಿದ್ದರು. ರಿಯಾನ್‌ ಪರಾಗ್‌ ನಾಯಕನಾಗಿ ಅನೇಕ ಪಂದ್ಯಗಳನ್ನ ಮುನ್ನಡೆಸಿದ್ದರು. ಇದು ಅಸಮಾಧಾನ ಮೂಡಿಸಿತ್ತು ಎನ್ನಲಾಗಿದೆ. ಅಲ್ಲದೇ ಜೋಸ್‌ ಬಟ್ಲರ್‌ ಅವರನ್ನ ಫ್ರಾಂಚೈಸಿಯಿಂದ ಕೈಬಿಟ್ಟಿದ್ದು ಸಹ ಸಂಜುಗೆ ಬೇಸರ ತರಿಸಿತ್ತಂತೆ. ಹೀಗಾಗಿ 2025ರ ಟೂರ್ನಿ ಮುಗಿದ ಬೆನ್ನಲ್ಲೇ ತನ್ನನ್ನು ಹರಾಜಿನಲ್ಲಿ ಬಿಡುಗಡೆ ಮಾಡಲು ಅಥವಾ ಬೇರೆ ಫ್ರಾಂಚೈಸಿ ಜೊತೆಗೆ ವಿನಿಮಯ ಮಾಡುವಂತೆ ಕೇಳಿಕೊಂಡಿದ್ದರು. ಆರಂಭದಲ್ಲಿ ಸಂಜು ಸಿಎಸ್‌ಕೆ ಸೇರಿಕೊಳ್ಳಲಿದ್ದು, ಧೋನಿ ಬಳಿಕ ವಿಕೆಟ್‌ ಕೀಪರ್‌ ಬ್ಯಾಟರ್‌ ಆಗಲಿದ್ದಾರೆ ಎನ್ನಲಾಗಿತ್ತು. ಆದರೀಗ ಅವರು ಆರ್‌ಸಿಬಿ ಫ್ರಾಂಚೈಸಿ ಸೇರಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

IPL RR VS RCB 2

ಈಗಾಗಲೇ 2026ರ ಐಪಿಎಲ್‌ನ ಮಿನಿ ಹರಾಜಿಗೆ ತಯಾರಿ ನಡೆಯುತ್ತಿದೆ. ನವೆಂಬರ್‌ 15ರ ಒಳಗೆ ಎಲ್ಲಾ ಫ್ರಾಂಚೈಸಿಗಳು ರಿಟೇನ್‌ ಆಟಗಾರರ ಪಟ್ಟಿಯನ್ನು ಬಿಡುಗಡೆಗೊಳಿಸುವಂತೆ ಐಪಿಎಲ್‌ ಮಂಡಳಿ ತಿಳಿಸಿದೆ. ಡಿಸೆಂಬರ್‌ 13 ರಿಂದ 15ರ ಒಳಗೆ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದೆ. ಪ್ರತಿ ಮೂರು ವರ್ಷಗಳಿಗೊಮ್ಮೆ ಮಾತ್ರವೆ ಮೆಗಾ ಹರಾಜು ನಡೆಯಲಿದೆ.

Share This Article