ಕರ್ನಾಟಕ ಸೇರಿದಂತೆ 22 ರಾಜ್ಯಗಳಲ್ಲಿ ಇ.ಡಿ ದಾಳಿ – ಕೋಟಿ ಕೋಟಿ ಹಣ ಸೀಜ್

Public TV
1 Min Read

ಬೆಂಗಳೂರು: ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಮೇಘಾಲಯ ಮತ್ತು ಪಂಜಾಬ್ ಸೇರಿದಂತೆ 22 ರಾಜ್ಯಗಳಲ್ಲಿ ಇ.ಡಿ ಅಧಿಕಾರಿಗಳು ದಾಳಿ (ED Raid) ನಡೆಸಿ ಕೋಟಿ ಕೋಟಿ ಹಣ ಸೀಜ್ ಮಾಡಿದ್ದಾರೆ.

ಚೆನ್ನೈ (Chennai) ಮೂಲದ ಸ್ಯಾಂಟಿಯಾಗೊ ಮಾರ್ಟಿನ್ (Santiago Martin) ಅವರ ಸಂಸ್ಥೆ ಫ್ಯೂಚರ್ ಗೇಮಿಂಗ್ ಮತ್ತು ಹೋಟೆಲ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರ ಸಹವರ್ತಿಗಳ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

2002ರ ಪಿಎಂಎಲ್‍ಎ ಕಾಯ್ದೆ ಅಡಿಯಲ್ಲಿ ಇಡಿ ಈ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದೆ. ಕಾರ್ಯಾಚರಣೆಯ ಸಮಯದಲ್ಲಿ, ಮಹತ್ವದ ದಾಖಲೆಗಳು, ಡಿಜಿಟಲ್ ಸಾಧನಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

12.41 ಕೋಟಿ ರೂ. ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ ಅಕೌಂಟ್ ಹಾಗೂ ಎಫ್‍ಡಿ ಸೇರಿ 6.42 ಕೋಟಿ ರೂ. ಹಣವನ್ನು ಫ್ರೀಜ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share This Article