ಸಂತೂರ್ ವಾದಕ ಭಜನ್ ಸೊಪೋರಿ ಇನ್ನಿಲ್ಲ

Public TV
1 Min Read

ನವದೆಹಲಿ: ಖ್ಯಾತ ಸಂತೂರ್ ವಾದಕ ಭಜನ್ ಸೊಪೋರಿ (73) ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಗುರುಗ್ರಾಮ್ ಆಸ್ಪತ್ರೆಯಲ್ಲಿಂದು ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕಳೆದ ವರ್ಷ ಜೂನ್‌ನಲ್ಲಿ ಸೊಪೋರಿ ಅವರಿಗೆ ಕರುಳಿನ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಇಮ್ಯುನೊ ಥೆರಪಿ ಚಿಕಿತ್ಸೆಗಾಗಿ ಅವರನ್ನು 3 ವಾರಗಳ ಹಿಂದೆ ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಅವರ ಪುತ್ರ ಅಭಯ್ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿಗೆ ಬಂದಿದ್ದ ಕೇರಳದ 12 ವರ್ಷದ ಹುಡುಗಿ ಹಂದಿ ಜ್ವರಕ್ಕೆ ಬಲಿ – ರಾಜಧಾನಿಗೆ ಆತಂಕ

ಭಜನ್ ಸೊಪೋರಿ ವಾಷಿಂಗ್ಟನ್ ವಿಶ್ವವಿದ್ಯಾಲಯದಿಂದ ಪಾಶ್ಚಿಮಾತ್ಯ ಶಾಸ್ತ್ರೀಯ ಸಂಗೀತವನ್ನು ಮತ್ತು ಅವರ ತಂದೆ ಮತ್ತು ತಾತನಿಂದ ಹಿಂದೂಸ್ತಾನಿ ಸಂಗೀತವನ್ನು ಕಲಿತರು. ಅಲ್ಲದೆ ತಮ್ಮ ವೃತ್ತಿಜೀವನದ ಸಾಧನೆಗಳ ಮೂಲಕ 2004 ರಲ್ಲಿ ಪದ್ಮಶ್ರೀ, 1992 ರಲ್ಲಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯ ಜೀವಮಾನ ಸಾಧನೆ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದರು.

Share This Article
Leave a Comment

Leave a Reply

Your email address will not be published. Required fields are marked *