ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್

0 Min Read

ಜೋಗಿ ಪ್ರೇಮ್‌ ನಿರ್ದೇಶನದ ಹಾಗೂ ನಟ ಧ್ರುವ ಸರ್ಜಾ ಅಭಿನಯದ ‘ಕೆಡಿ’ ಸಿನಿಮಾದ ‘ಸರ್ಸೆ ಸರ್ಸೆ ನಿನ್ನ ಸೆರಗಾ ಸರ್ಸೆ’ ಹಾಡನ್ನು ಕೇಂದ್ರ ಸರ್ಕಾರ ಬ್ಯಾನ್‌ ಮಾಡಿದೆ.

ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್, ಸರ್ಕಾರ ಈ ಹಾಡಿನ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಭಾರತದಲ್ಲಿ ವಾಕ್ ಸ್ವಾತಂತ್ರ್ಯವು ಸಾಂವಿಧಾನಿಕ ಮಿತಿಗಳಿಗೆ ಒಳಪಟ್ಟಿರುತ್ತದೆ. ಸಂವಿಧಾನವು ಸೂಚಿಸಿರುವ ಸಮಂಜಸವಾದ ನಿರ್ಬಂಧಗಳ ವ್ಯಾಪ್ತಿಯಲ್ಲಿ ಅಭಿವ್ಯಕ್ತಿ ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

Share This Article