ಜಾತಿಯ ವಿಷಬೀಜ ಬಿತ್ತುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡ್ತಿದೆ: ಸತೀಶ್ ಜಾರಕಿಹೊಳಿ

Public TV
1 Min Read

ಚಿಕ್ಕೋಡಿ: ಬಿಜೆಪಿ ಸರ್ಕಾರಕ್ಕೆ ಯಾವುದೇ ಜನಹಿತದ ಹಾಗೂ ಜನಪರ ಕಾರ್ಯಗಳ ಕಡೆಗೆ ಗಮನ ಇಲ್ಲ. ಕೇವಲ ಜಾತಿಯ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದರು.

ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರಕ್ಕೆ ಕೇವಲ ಚುನಾವಣೆ ಗೆದ್ದು, ರಾಜ್ಯವನ್ನು ಲೂಟಿ ಹೊಡೆಯುವುದೇ ಅವರ ಕೆಲಸವಾಗಿದೆ. ಈಗಿರುವ ಅವರ ಪರ್ಸೆಂಟೇಜ್ ಪ್ರಮಾಣದಲ್ಲಿ ಮುಂದೆ 50% ಜಾಸ್ತಿಯಾಗಬಹುದು ಎಂದು ಲೇವಡಿ ಮಾಡಿದರು.

ಜನಸಾಮಾನ್ಯರಿಂದ ಹಿಡಿದು ವಿವಿಧೆಡೆ ಪರ್ಸೆಂಟೇಜ್ ಆರೋಪಗಳು ಸರ್ಕಾರ ಮೇಲೆ ಬರುತ್ತಿವೆ. ಕೇವಲ ವಿರೋಧ ಪಕ್ಷವಾಗಿ ಹೇಳುತ್ತಿಲ್ಲ. ಪರ್ಸೆಂಟೇಜ್ ಕಾಟಕ್ಕೆ ಜನಸಾಮಾನ್ಯರು ರೋಸಿ ಹೋಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.   ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಆಮಿಷವೊಡ್ಡಿ ಮಹಿಳೆಯಿಂದ ವಂಚನೆ

ಅಲ್ಲದೆ ಪಿಎಸ್‍ಐ ನೇಮಕಾತಿಯಲ್ಲಿ ನಡೆದ ಹಗರಣದ ತನಿಖೆ ಪಾರದರ್ಶಕವಾಗಿ ಆಗಬೇಕು. ಯಾರೇ ಇರಲಿ ತಪ್ಪಿತಸ್ಥರಿಗೆ ಶಿಕ್ಷೆಯಾಬೇಕು ಎಂದು ಒತ್ತಾಯಿಸಿದರು. ಮುಂಬರುವ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳನ್ನು ಆರು ತಿಂಗಳ ಮುಂಚೆ ಟಿಕೆಟ್ ಘೋಷಣೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ಸ್ಥಿತಿ ಬಗ್ಗೆ ಸಿಎಂ ಹೇಳಿದ್ದೇನು?

Share This Article
Leave a Comment

Leave a Reply

Your email address will not be published. Required fields are marked *