ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸವದಿ ರಾಜೀನಾಮೆ

By
1 Min Read

ಬೆಂಗಳೂರು: ಅಥಣಿ ಕ್ಷೇತ್ರದ ಟಿಕೆಟ್ ವಂಚಿತರಾಗಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ (Laxman Savadi) ಬಿಜೆಪಿ (BJP) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ (Resignation) ನೀಡಿದ್ದಾರೆ.

ಸವದಿ ಪಕ್ಷದ ಪ್ರಾಥಮಿಕ ಸದಸ್ಯತ್ವದ ಜೊತೆಗೆ ಬಿಜೆಪಿ ಉಪಾಧ್ಯಕ್ಷ ಸ್ಥಾನ, ಪಕ್ಷದ ಕೋರ್ ಕಮಿಟಿಯ ಸದಸ್ಯ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ನಳಿನ್ ಕುಮಾರ್ ಕಟೀಲ್ ಅವರಿಗೆ ರವಾನಿಸಿದ್ದಾರೆ.

ಇತ್ತ ಸವದಿ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದೆ. ಕಾಂಗ್ರೆಸ್ ಪಕ್ಷದ ನಾಯಕರನ್ನು ಸವದಿ ಭೇಟಿ ಮಾಡಿದ್ದು, ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಡಿಕೆ ಶಿವಕುಮಾರ್ ತಂತ್ರ ಹೆಣೆದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ನಾಯಕರ ಮುಂದೆ 3 ಡಿಮ್ಯಾಂಡ್‌ ಇಟ್ಟ ಲಕ್ಷ್ಮಣ ಸವದಿ – ಏನದು ಬೇಡಿಕೆ?

ಶುಕ್ರವಾರ ಬೆಂಗಳೂರಿಗೆ ಆಗಮಿಸಿದ ಸವದಿ ಕಾಂಗ್ರೆಸ್‌ನ ನಾಯಕರಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಸುರ್ಜೇವಾಲಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಇದನ್ನೂ ಓದಿ: ಸವದಿ ಬಿಜೆಪಿ ತೊರೆದ ವಿಚಾರ ತೀವ್ರ ದುಃಖ ತಂದಿದೆ: ಸಿಎಂ

Share This Article