ಹಿಂದೂಗಳು ಒಟ್ಟಾಗಿರಬೇಕೆಂಬುದು ಸಾವರ್ಕರ್ ಕನಸಾಗಿತ್ತು – ಮೊಮ್ಮಗ ಸಾತ್ಯಕಿ ಸಾವರ್ಕರ್

Public TV
1 Min Read

ಶಿವಮೊಗ್ಗ: ಹಿಂದೂಗಳು (Hindu Community) ಒಗ್ಗಟ್ಟಾಗಿರಬೇಕೆಂಬುದು ಸಾವರ್ಕರ್ (VD Savarkar) ಅವರ ಕನಸಾಗಿತ್ತು ಎಂದು ವಿ.ಡಿ ಸಾವರ್ಕರ್ ಅವರ ಮೊಮ್ಮಗ ಸಾತ್ಯಕಿ ಅಶೋಕ್‌ ಸಾವರ್ಕರ್ (Satyaki Ashok Savarkar) ಹೇಳಿದ್ದಾರೆ.

ಶಿವಮೊಗ್ಗದಲ್ಲಿ (Shivamogga) `ಸಾವರ್ಕರ್ ಸಾಮ್ರಾಜ್ಯ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಸಾವರ್ಕರ್ ಅವರಿಗೆ ಆಗಸ್ಟ್ 13 ರಂದು ಅಪಮಾನಿಸಲಾಗಿತ್ತು. ಶಿವಮೊಗ್ಗದ ಯುವ ದೇಶಪ್ರೇಮಿಗಳು ಇದನ್ನು ಮರೆಯಲಿಲ್ಲ. ಆದರೆ ಹಿಂದೂಗಳು ಒಗ್ಗಟ್ಟಾಗಿರಬೇಕೆಂಬುದು ಸಾವರ್ಕರ್ ಅವರ ಕನಸಾಗಿತ್ತು ಎಂದು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಬುದ್ಧಿವಂತರು ಯಾವಾಗಲು ಏಕಾಂಗಿಯಾಗಿಯೇ ಕೆಲಸ ಮಾಡ್ತಾರೆ.. ಯಾಕೆ ಗೊತ್ತಾ?

ಸಾವರ್ಕರ್ ಅವರ ಹಿಂದುತ್ವದ (Hinduism) ಮಂತ್ರ ವಾಕ್ಯ ಎಲ್ಲರೂ ಜ್ಞಾಪಕವಿಟ್ಟುಕೊಳ್ಳಬೇಕು. ಭಾರತದ ಮೇಲೆ ಅನೇಕ ಆಕ್ರಮಣಗಳಾಗಿವೆ. ಆದರೆ ಅನೇಕ ಮಹನೀಯರು, ಯೋಧರು, ಶಿವಾಜಿ ಮಹರಾಜ್, ರಾಣಪ್ರತಾಪ್ ಸಿಂಗ್‌ರಂತಹ ಪರಾಕ್ರಮಿಗಳು ಹಿಂದೂಸ್ಥಾನವನ್ನು ಉಳಿಸಲು ತ್ಯಾಗ, ಬಲಿದಾನ ಮಾಡಿದ್ದಾರೆ. ಇಂದಿನ ಈ ದೀಪ ಬೆಳಗಿಸಿರುವುದು, ಇಡೀ ವಿಶ್ವವೇ ನೋಡುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಪಾದಯಾತ್ರೆ – ಕೈ-ಕೈ ಹಿಡಿದು ಹೆಜ್ಜೆ ಹಾಕಿದ ರಾಹುಲ್, ರಮ್ಯಾ

ಈ ಕಾರ್ಯಕ್ರಮದ ಮೂಲಕ ದೇಶಭಕ್ತರನ್ನು ಎಚ್ಚರಿಸುವ ಕೆಲಸವಾಗಬೇಕು. ಸಾವರ್ಕರ್ ಅವರು ಹೊಂದಿದ್ದ ಧೇಯೋದ್ದೇಶಗಳನ್ನು ನಾಡಿನೆಲ್ಲೆಡೆ ಮತ್ತೆ ಪಸರಿಸಬೇಕು. ಅನೇಕ ದುಷ್ಟಶಕ್ತಿಗಳು ದೇಶದ ಮೇಲೆ ಆಕ್ರಮಣ ಮಾಡಲು ಹೊಂಚು ಹಾಕುತ್ತಿದ್ದು, ಇದನ್ನು ಮೆಟ್ಟಿ ನಿಲ್ಲುವ ಯೋಜನೆ ನಾವೆಲ್ಲರೂ ರೂಪಿಸಬೇಕು ಎಂದು ಕರೆ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *