ಬ್ರ್ಯಾಂಡ್ ಬೆಂಗಳೂರು ಹೆಸರು ಉಳಿಸಿ – ಪ್ರಧಾನಿಗೆ ನಟ ಅನಿರುದ್ಧ್ ಪತ್ರ

Public TV
1 Min Read

ಬೆಂಗಳೂರು: ಬ್ರ್ಯಾಂಡ್ ಬೆಂಗಳೂರಿನ ಹೆಸರನ್ನು ಉಳಿಸಿ ಎಂದು ಸ್ಯಾಂಡಲ್‍ವುಡ್ ನಟ ಅನಿರುದ್ಧ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಐಟಿ ಹಬ್, ಗ್ರೀನ್ ಸಿಟಿ ಹೀಗೆ ಇಡೀ ವಿಶ್ವದಲ್ಲಿಯೇ ಗಮನ ಸೆಳೆದ ಬೆಂಗಳೂರು ಇತ್ತೀಚೆಗೆ ಅವ್ಯವಸ್ಥೆಗಳ ಕೂಪವಾಗುತ್ತಿದೆ. ಬೆಂಗಳೂರಿನ ಸಮಸ್ಯೆಯನ್ನು ಆಲಿಸಲು ಪ್ರತ್ಯೇಕವಾಗಿರುವ ಇಲಾಖೆಯನ್ನು ರಚಿಸಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ಕಿವಿ ಹಿಂಡುವ ಕೆಲಸ ಮಾಡಬೇಕು. ಇಲ್ಲಿನ ಜನಪ್ರತಿನಿಧಿಗಳು ಇಚ್ಛಾ ಶಕ್ತಿ ಪ್ರದರ್ಶಿಸಿದರೆ ಸ್ವಚ್ಛ ನಗರಿ ಬೆಂಗಳೂರು ಆಗಬಹುದು ಅಂತ ಪ್ರಧಾನಿಗೆ ಪತ್ರದ ಮೂಲಕ ಅನಿರುದ್ಧ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್‍ಗೆ ಪಿತೃ ವಿಯೋಗ

 

View this post on Instagram

 

A post shared by Aniruddha Jatkar (@aniruddhajatkar)

ಕಳೆದ ವಾರವಷ್ಟೇ ಬ್ರ್ಯಾಂಡ್ ಬೆಂಗಳೂರು ಕಡೆ ಸರ್ಕಾರ ಗಮನಹರಿಸಬೇಕು ಎಂದು ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಪತ್ರ ಬರೆದಿದ್ದರು. ಇದನ್ನೂ ಓದಿ: ಮಳೆ ಅವಾಂತರದಿಂದ ಬೆಂಗಳೂರು ಬ್ರ್ಯಾಂಡ್ ಉಳಿಸಿಕೊಳ್ಳಲು ಸಿಎಂಗೆ ಪತ್ರ ಬರೆದ ಎಸ್ಎಂ ಕೃಷ್ಣ

ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿರಂತರ ಮುಂಗಾರ ಪೂರ್ವ ಮಳೆಯಗುತ್ತಿದ್ದು ಇದರಿಂದ ಹಲವು ಅವಾಂತರಗಳು ಘಟಿಸಿ ಜನಜೀವನಕ್ಕೆ ತೀವ್ರ ತೊಂದರೆಯನ್ನು ಉಂಟುಮಾಡಿದೆ. ಅದರಲ್ಲೂ ವಿಶ್ವದಲ್ಲಿನ ವೇಗದ ಬೆಳವಣಿಗೆಗಳ ನಗರಗಳ ಸಾಲಿನಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರು ನಗರದಲ್ಲಿನ ಮಳೆ ಅನಾಹುತಗಳು ಆತಂಕ ಹುಟ್ಟಿಸಿದೆ. ಇದು ‘ಬ್ರಾಂಡ್ ಬೆಂಗಳೂರು’ ಹೆಸರಿಗೆ ಆತಂಕ ಸೃಷ್ಟಿಸಿದ್ದು, ಭವಿಷ್ಯತ್ತಿನಲ್ಲಿ ಇದರಿಂದ ಕೈಗಾರಿಕೆಗಳ ಸ್ಥಾಪನೆ ಮತ್ತು ರಾಜ್ಯಕ್ಕೆ ಬಂಡವಾಳ ಹೂಡುವ ಹೂಡಿಕೆದಾರರಿಗೆ ತಪ್ಪು ಸಂದೇಶ ರವಾನೆಯಾಗಲಿದೆ. ಅದರಿಂದ ಇಲ್ಲಿ ಪ್ರತಿಷ್ಟಾಪನೆಗೊಳ್ಳಬಹುದಾದ ಕೈಗಾರಿಕಾ ವಸಹಾತುಗಳು ಬೇರೆ ರಾಜ್ಯಗಳ ಪಾಲಗಿ ನಮ್ಮ ರಾಜ್ಯದ ಅಭಿವೃದ್ಧಿಗೆ ತೊಡಕಾಗಲಿದೆ ಎಂದು ಎಸ್.ಎಂ. ಕೃಷ್ಣ ಅವರು ಪತ್ರದಲ್ಲಿ ಕಳವಳವನ್ನು ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ನಟ ಅನಿರುದ್ಧ್ ಕೂಡ ಬ್ರ್ಯಾಂಡ್ ಬೆಂಗಳೂರು ಬಗ್ಗೆ ಪ್ರಶ್ನೆ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *