ತಾಯಿ ಗರ್ಭದಷ್ಟೇ ಭೂಗರ್ಭಕ್ಕೆ ಮಹತ್ವವಿದೆ- ಮಣ್ಣು ಉಳಿಸಿ ಅಭಿಯಾನಕ್ಕೆ ಬೊಮ್ಮಾಯಿ ಚಾಲನೆ

Public TV
1 Min Read

ಉಡುಪಿ: ಭೂಮಿ ಮತ್ತು ಮಣ್ಣಿನ ಸಂರಕ್ಷಣೆಯ ಸಲುವಾಗಿ ಸದ್ಗುರು ಜಗ್ಗಿ ವಾಸುದೇವ್ ಮಣ್ಣು ಉಳಿಸಿ ಅಭಿಯಾನವನ್ನು ಆರಂಭಿಸಿದ್ದಾರೆ. ಈ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಪಿಯಲ್ಲಿ ಚಾಲನೆ ನೀಡಿದರು.

ಸದ್ಗುರು ಜಗ್ಗಿ ವಾಸುದೇವ್ ಈಗಾಗಲೇ ಕಾವೇರಿ ಉಳಿಸಿ ಅಭಿಯಾನವನ್ನು ನಡೆಸುತ್ತಿದ್ದಾರೆ. ಕಾವೇರಿ ನದಿಯ ರಕ್ಷಣೆಗೆ ಈಗಾಗಲೇ ದೊಡ್ಡಮಟ್ಟದ ಅಭಿಯಾನ ನಡೆಯುತ್ತಿದೆ. ಈ ನಡುವೆ ಸದ್ಗುರು ಮಣ್ಣು ಉಳಿಸಿ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಪಿ ಜಿಲ್ಲೆ ಮಣಿಪಾಲದಲ್ಲಿ ಉಳಿಸಿ ಅಭಿಯಾನಕ್ಕೆ ಹಸಿರು ನಿಶಾನೆ ತೋರಿದರು. ಇದನ್ನೂ ಓದಿ: ಶಿಕ್ಷಕರ ಒತ್ತಾಯಕ್ಕೆ 100 ಬಸ್ಕಿ ಹೊಡೆದ 7 ಮಂದಿ ವಿದ್ಯಾರ್ಥಿನಿಯರು – ಆಸ್ಪತ್ರೆಗೆ ದಾಖಲು

ಮಣಿಪಾಲದ ಕಾಯಿನ್ ಸರ್ಕಲ್‌ನಲ್ಲಿ ಅಭಿಯಾನಕ್ಕೆ ಚಾಲನೆ ನೀಡಿ ಮಣ್ಣಿನ ಶ್ರೇಷ್ಠತೆಯ ಬಗ್ಗೆ ಅದರ ರಕ್ಷಣೆಯ ಬಗ್ಗೆ ಸದ್ಗುರು ಅನುಯಾಯಿಗಳ ಜೊತೆ ಮಾತನಾಡಿದರು. ಮಣ್ಣಿನ ರಕ್ಷಣೆ ಬಹಳ ಅಗತ್ಯವಾಗಿದೆ. ಸಾರ್ವಜನಿಕರಲ್ಲಿ ಮಣ್ಣಿನ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ನೀಡಿದರು. ಇದನ್ನೂ ಓದಿ: ಪಾಕಿಸ್ತಾನದ ನೂತನ ಪ್ರಧಾನಿಗೆ ಮೋದಿ ಅಭಿನಂದನೆ

ಈ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಬೊಮ್ಮಾಯಿ ಅವರು, ಸದ್ಗುರು ನಿಸರ್ಗದ ರಕ್ಷಣೆಗೆ ದೊಡ್ಡ ಅಭಿಯಾನ ಮಾಡುತ್ತಿದ್ದಾರೆ. ಸೇವ್ ಕಾವೇರಿ, ಮಣ್ಣು ಉಳಿಸಿ ಅಭಿಯಾನವನ್ನು ಸದ್ಗುರು ಶುರು ಮಾಡಿದ್ದಾರೆ. ಮಣ್ಣಿಗೂ ಮನುಷ್ಯರಿಗೂ ನೇರವಾದ ಸಂಬಂಧವಿದೆ. ನಮ್ಮ ಬದುಕು ಮತ್ತು ಆಹಾರ ಮಣ್ಣಿಗೆ ಆಧಾರಿತವಾಗಿದೆ. ತಾಯಿ ಗರ್ಭ ಮತ್ತು ಭೂಗರ್ಭ ಬಹಳ ಮಹತ್ವದ್ದಾಗಿದೆ. ಭೂಗರ್ಭವನ್ನು ಚೆನ್ನಾಗಿ ಕಾಪಾಡಲು ಮಣ್ಣಿನ ಅವಶ್ಯಕತೆ ಇದೆ. ಭೂಮಿ ಮತ್ತು ಮಣ್ಣನ್ನು ಕಾಪಾಡುವುದು ಮನುಷ್ಯನ ಆದ್ಯ ಕರ್ತವ್ಯ ಎಂದು ಹೇಳಿದ್ದಾರೆ.

ಮಣ್ಣು ಉಳಿಸಿ ಅಭಿಯಾನದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ರಸ್ತೆ, ಕಾಯಿನ್ ಸರ್ಕಲ್, ಮಣಿಪಾಲ ನಗರ, ಉಡುಪಿಯ ಪ್ರಮುಖ ರಸ್ತೆಗಳಲ್ಲಿ ಅಭಿಯಾನದ ಬೋರ್ಡ್‌ಗಳನ್ನು, ಪೋಸ್ಟರ್‌ಗಳನ್ನು ಹಿಡಿದು ಜನಜಾಗೃತಿ ಮೂಡಿಸಿದರು. ಉಡುಪಿ ಜಿಲ್ಲೆಯ ಬೇರೆ ಬೇರೆ ಶಾಲೆಗಳು ಸಂಸ್ಥೆಗಳಲ್ಲಿ ಈ ಬಗ್ಗೆ ಅಭಿಯಾನವನ್ನು ನಿರಂತರವಾಗಿ ಮುಂದುವರಿಸುವುದಾಗಿ ಪ್ರವೀಣ್ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *