ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

2 Min Read

ನವದೆಹಲಿ: ಪರಿಸರ ಸ್ನೇಹಿ ಬಟ್ಟೆಯ ಕೈಚೀಲಗಳನ್ನು ಖರೀದಿಸುವ ಪ್ರಕ್ರಿಯೆಯಲ್ಲಿ ಕೋಟ್ಯಂತರ ರೂ. ಅಕ್ರಮ ಎಸಗಿದ ಆರೋಪದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ವಿರುದ್ಧ ತನಿಖೆ ನಡೆಸಲು ಪೂರ್ವಾನುಮತಿ ನೀಡಲು ಕರ್ನಾಟಕ ಸರ್ಕಾರಕ್ಕೆ ನಿರ್ದೇಶಿಸಿದ್ದ ಹೈಕೋರ್ಟ್ (Highcourt) ಆದೇಶಕ್ಕೆ ಸುಪ್ರೀಂ ಕೋರ್ಟ್ (Supreme Court) ಸೋಮವಾರ ತಡೆಯಾಜ್ಞೆ ನೀಡಿದೆ.

ರೋಹಿಣಿ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ದೀಪಂಕರ ದತ್ತ  ಹಾಗೂ ಸತೀಶ್ ಚಂದ್ರ ಶರ್ಮಾ ಪೀಠವು ಪ್ರತಿವಾದಿಗಳಾದ ರಾಜ್ಯ ಸರ್ಕಾರ ಹಾಗೂ ಎನ್.ಆರ್. ರವಿಚಂದ್ರೇಗೌಡ ಅವರಿಗೆ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಮೈಸೂರು ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಮುಕ್ತ ವಾತಾವರಣ ನಿರ್ಮಿಸಬೇಕು ಮತ್ತು ಪ್ಲಾಸ್ಟಿಕ್ ಬಳಕೆಗೆ ಇತಿಶ್ರೀ ಹಾಡಿ ಬಟ್ಟೆಯ ಕೈಚೀಲಗಳನ್ನು ಬಳಸಬೇಕು ಎಂದು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರು ಜಿಲ್ಲೆಯ ನಗರ, ಗ್ರಾಮಾಂತರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶಿಸಿದ್ದರು. ಇದನ್ನೂ ಓದಿ: ಗಾಂಜಾ ಸೇವಿಸಿ ವಿಚಿತ್ರ ವರ್ತನೆ – ವಿದ್ಯಾರ್ಥಿ ವಿರುದ್ಧ ಸುಮೊಟೊ ಕೇಸ್ ದಾಖಲು

ಈ ನಿಟ್ಟಿನಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಪ್ರತಿ ಚೀಲಕ್ಕೆ 13 ರೂ. ಇದ್ದರೆ ಅವುಗಳನ್ನು ಪ್ರತಿ ಚೀಲಕ್ಕೆ 52 ರೂ.ನಷ್ಟು ದರ ನೀಡಿ ಖರೀದಿಸಲಾಗಿದೆ. ಈ ಮೂಲಕ ಸರ್ಕಾರದ ಬೊಕ್ಕಸಕ್ಕೆ 7.65 ಕೋಟಿ ರೂ.ನಷ್ಟು ಉಂಟು ಮಾಡಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಪ್ರಯೋಜನ ನೀಡುವ ಉದ್ದೇಶದಿಂದ ಕಲ್ಯಾಣ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಈ ಕೈಚೀಲಗಳ ಖರೀದಿಗೆ ಬಳಸಲಾಗಿದೆ. ಗ್ರಾಮ ಸ್ವರಾಜ್ಯದ ಎಲ್ಲ ಕನಸುಗಳನ್ನು ಗಾಳಿಗೆ ತೂರಿ ಭ್ರಷ್ಟಾಚಾರ ಎಸಗಲಾಗಿದೆ’ ಎಂದು ಅರ್ಜಿದಾರರು ಆರೋಪಿಸಿದ್ದರು. ಇದನ್ನೂ ಓದಿ: 2 ವರ್ಷದ ಬಳಿಕ ವಿಧಾನಸೌಧಕ್ಕೆ ಬಂದ ಹೆಚ್‌ಡಿಕೆ – ಮಂಡ್ಯದಲ್ಲಿ ARAI ಕೇಂದ್ರದ ಜೊತೆ ಕೈಗಾರಿಕಾ ಹಬ್‌ ಸ್ಥಾಪನೆಗೆ ಚಿಂತನೆ

ಅಕ್ರಮದ ಕುರಿತಂತೆ, ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಕೋರಿ ಎನ್.ಆರ್.ರವಿಚಂದ್ರೇಗೌಡ ಅವರು ಮೈಸೂರು ಜಿಲ್ಲಾ ಭ್ರಷ್ಟಚಾರ ನಿಗ್ರಹ ದಳಕ್ಕೆ (ಎಸಿಬಿ) 2021ರ ಅಕ್ಟೋಬರ್ 13ರಂದು ದೂರು ನೀಡಿದ್ದರು. ಇದನ್ನೂ ಓದಿ: ಮಂತ್ರಾಲಯ ರಾಯರ ಮಠಕ್ಕೆ ಮಂಜೂರಾದ ಜಾಗದ ಸರ್ವೆಗೆ ಭಾರೀ ವಿರೋಧ – ಹಲವರು ವಶಕ್ಕೆ

Share This Article