ಶಾಲಾ ವಾಹನಕ್ಕೆ ರೈಲು ಡಿಕ್ಕಿ – 3 ವಿದ್ಯಾರ್ಥಿಗಳು ಸಾವು, ಹಲವರಿಗೆ ಗಾಯ

Public TV
1 Min Read

– ರೈಲು ಬರುವಾಗ ಮುಚ್ಚಿರದ ಗೇಟ್‌?

ಚೆನ್ನೈ: ಶಾಲಾ ಬಸ್ಸಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ 10 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ

ಮಂಗಳವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಶಾಲಾ ಬಸ್‌ ಚಾಲಕ ರೈಲು ಬರುವುದನ್ನು ಗಮನಿಸದೇ ಹಳಿ ದಾಟಲು ಯತ್ನಿಸಿದ್ದು, ಈ ವೇಳೆ ಅಪಘಾತ ಸಂಭವಿಸಿದೆ. ರೈಲು ಡಿಕ್ಕಿಯಾದ ರಭಸಕ್ಕೆ ಬಸ್‌ ನಜ್ಜುಗುಜ್ಜಾಗಿದ್ದು, ಹಲವಾರು ಅಡಿಗಳಷ್ಟು ದೂರ ಹೋಗಿ ಬಿದ್ದಿದೆ. ಇದನ್ನೂ ಓದಿ: ರೈಲು ದುರಂತಕ್ಕೆ ಸಂಚು ಹೆಚ್ಚಾಗುತ್ತಿದ್ದಂತೆ 75 ಲಕ್ಷ AI ಕ್ಯಾಮೆರಾ ಖರೀದಿಗೆ ಮುಂದಾದ ಇಲಾಖೆ

ಈ ಘಟನೆಯ ಬಗ್ಗೆ ಸ್ಥಳೀಯ ನಿವಾಸಿಗಳು ಆಕ್ರೋಶ ಹೊರಹಾಕಿದ್ದು, ರೈಲ್ವೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ. ರೈಲ್ವೇ ಕ್ರಾಸಿಂಗ್‌ನಲ್ಲಿದ್ದ ಗೇಟ್‌ಕೀಪರ್ ನಿದ್ರಿಸುತ್ತಿದ್ದ. ಸಮಯಕ್ಕೆ ಸರಿಯಾಗಿ ಗೇಟ್ ಮುಚ್ಚದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಆರೋಪ ಮಾಡಿದ್ದಾರೆ.

ಈ ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇನ್ನೂ ಹೆಚ್ಚಿನ ಸಾವುನೋವುಗಳು ಸಂಭವಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಆಂಧ್ರದಲ್ಲಿ ರೈಲು ದುರಂತ – 12 ರೈಲುಗಳ ಸಂಚಾರ ರದ್ದು

Share This Article