ವಿವಾದಿತ ಪಠ್ಯಗಳ ಮಾರ್ಪಾಡಿಗೆ ಸರ್ಕಾರದ ಆದೇಶ – ಕೈ ಬಿಟ್ಟ ಯಾವ ಅಂಶಗಳು ಸೇರ್ಪಡೆಯಾಗಿವೆ?

Public TV
3 Min Read

ಬೆಂಗಳೂರು: ಪರಿಷ್ಕೃತ ಪಠ್ಯಪುಸ್ತಕ ವಿವಾದವನ್ನು ತಣ್ಣಗಾಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ವಿವಾದಿತ ಪಠ್ಯಗಳನ್ನು ಮಾರ್ಪಾಡು ಮಾಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸ್ವಾಮೀಜಿಗಳು, ಸಂಘ ಸಂಸ್ಥೆಗಳ ವಿರೋಧ ಹಿನ್ನಲೆಯಲ್ಲಿ ಸಿಎಂ ಬೊಮ್ಮಾಯಿ ಅವರು ಏನೇ ಪರಿಷ್ಕರಣೆ ಇದ್ದರೂ ಮಾರ್ಪಾಡು ಮಾಡುವುದಾಗಿ ತಿಳಿಸಿದ್ದರು. ಸಿಎಂ ಸೂಚನೆ‌ ಮೇರೆಗೆ ವಿವಾದಿತ ಪಠ್ಯಗಳ ಮಾರ್ಪಾಡಿಗೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಒಟ್ಟು 7 ಪಠ್ಯಗಳ ಮಾರ್ಪಾಡಿಗೆ ಸರ್ಕಾರ ಆದೇಶ ಹೊರಡಿಸಿದೆ. ಅಂಬೇಡ್ಕರ್, ಕುವೆಂಪು, ಸುರಪುರದ ರಾಜರು, ಸಿದ್ದಗಂಗಾ ಶ್ರೀಗಳು ಸೇರಿದಂತೆ ವಿವಾದಕ್ಕೆ ಕಾರಣವಾಗಿದ್ದ, ಪಠ್ಯಗಳ ಮಾರ್ಪಾಡಿಗೆ ಆದೇಶ ಹೊರಡಿಸಲಾಗಿದೆ.‌ ಮಾರ್ಪಾಡು ಪಠ್ಯವನ್ನು ಪ್ರತ್ಯೇಕ ಪುಸ್ತಕ ಮುದ್ರಣ ಮಾಡಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.

ಯಾವ ಪಠ್ಯದಲ್ಲಿ ಏನು ಸೇರ್ಪಡೆ?
9ನೇ ತರಗತಿ ಸಮಾಜ ವಿಜ್ಞಾನ ಭಾಗ-01ರ ನಮ್ಮ ಸಂವಿಧಾನ ಎಂಬ ಪಾಠದಲ್ಲಿ ಸಂವಿಧಾನದ ಕರಡು ರಚನೆ ಸಮಿತಿ ಬಗ್ಗೆ ಉಲ್ಲೇಖವಿರುತ್ತದೆ. ಅದರಲ್ಲಿ ಪರಿಷ್ಕೃತ ಪಠ್ಯದಲ್ಲಿ ಇವರು ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು “ಸಂವಿಧಾನದ ಶಿಲ್ಪಿ” ಎಂದು ಕರೆಯಲಾಗಿದೆ ಎಂಬ ವಾಕ್ಯವು ಇಲ್ಲವಾಗಿದ್ದು, ಸಂವಿಧಾನದ ಶಿಲ್ಪಿ” ಎಂಬುದರ ಪುನರ್ ಸೇರ್ಪಡೆ ಮಾಡಲಾಗುತ್ತದೆ.

7ನೇ ತರಗತಿಯ ಸಮಾಜ ವಿಜ್ಞಾನ ಭಾಗ-01ರ ಭಕ್ತಿ ಪಂಥ ಹಾಗೂ ಸೂಫಿ ಸಂತರು ಪಾಠವನ್ನು ಪೂರ್ಣವಾಗಿ ಕೈಬಿಡಲಾಗಿದೆ. 9ನೇ ತರಗತಿಯ ಸಮಾಜ ವಿಜ್ಞಾನ ವಿಷಯದ ಭಾಗ-2 ರಲ್ಲಿ ಭಕ್ತಿಪಂಥ ಎಂಬ ಅಧ್ಯಾಯದಲ್ಲಿ ಪುರಂದರದಾಸರು, ಕನಕದಾಸರ ಕುರಿತು ವಿಷಯಗಳು ಸಂಕ್ಷಿಪ್ತಗೊಳಿಸಲಾಗಿದೆ. ಆದ್ದರಿಂದ, 2021-22ನೇ ಸಾಲಿನ 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-01ರ ಭಕ್ತಿ ಪಂಥ ಹಾಗೂ ಸೂಫಿ ಸಂತರು ಸಂಪೂರ್ಣ ಪಾಠ ಸೇರ್ಪಡೆ.

7ನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದ ಪುಟ ಸಂಖ್ಯೆ 147 ರಲ್ಲಿ “ಗೊಂಬೆ ಕಲಿಸುವ ನೀತಿ” ಪದ್ಯದ ಕೃತಿಕಾರರ ಹೆಸರು ಡಾ. ಆರ್.ಎನ್. ಜಯಗೋಪಾಲ್ ಎಂದು ತಪ್ಪಾಗಿ ಮುದ್ರಣಗೊಂಡಿದ್ದು, ಮೂಲ ಕೃತಿಕಾರರಾದ ಚಿ.ಉದಯಶಂಕರ್ ರವರ ಕವಿ ಪರಿಚಯ ಸೇರ್ಪಡೆ ಮಾಡಲಾಗುತ್ತದೆ.

6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರ ಪಾಠ “ನಮ್ಮ ಹೆಮ್ಮೆಯ ರಾಜ್ಯ ಕರ್ನಾಟಕ” ಪಾಠದಲ್ಲಿ ಸಿದ್ದಗಂಗಾ ಮಠ ಹಾಗೂ ಆದಿಚುಂಚನಗಿರಿ ಮಠದ ಕುರಿತಾದ ಸೇವೆಯ ಸಾಲುಗಳು ಸೇರ್ಪಡೆ.

7ನೇ ತರಗತಿಯ ಸಮಾಜ ವಿಜ್ಞಾನ ಭಾಗ-1 ರ “ಮೈಸೂರು ಮತ್ತು ಇತರ ಸಂಸ್ಥಾನಗಳು” ಎಂಬ ಪಾಠದಲ್ಲಿದ್ದ ಸುರಪುರ ನಾಯಕರ ಕುರಿತಾದ ವಿವರಗಳು ಸೇರ್ಪಡೆ ಮಾಡಲಾಗ್ತಿದೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ ಮನೆಯವರು – ಲಿಂಗವನ್ನೇ ಬದಲಾಯಿಸಿಕೊಂಡ ಯುವತಿ

9ನೇ ತರಗತಿಯ ಸಮಾಜ ವಿಜ್ಞಾನ ಭಾಗ-1 ರ ಪಠ್ಯಪುಸ್ತಕದಲ್ಲಿ “ಭಾರತದ ಮತ ಪರಿವರ್ತಕರು” ಎಂಬ ಅಧ್ಯಾಯದಲ್ಲಿ ಬಸವಣ್ಣನವರ ಕುರಿತಾದ ವಿಷಯಾಂಶ, 7ನೇ ತರಗತಿ ಸಮಾಜ ವಿಜ್ಞಾನ ಭಾಗ-2 ರ ಪಠ್ಯಪುಸ್ತಕದ “ಕರ್ನಾಟಕ ರಾಜ್ಯ ಏಕೀಕರಣ ಹಾಗೂ ಗಡಿವಿವಾದಗಳು” ಎಂಬ ಪಾಠದಲ್ಲಿ ರಾಷ್ಟ್ರಕವಿ ಕುವೆಂಪು ರವರ ಹಾಗೂ ಹುಯಿಲಗೋಳ ನಾರಾಯಣರಾವ್‌ ರವರ ಭಾವಚಿತ್ರಗಳನ್ನು ಆಳವಡಿಸುವುದು.

text book bjp

4ನೇ ತರಗತಿಯ ಪರಿಸರ ಅಧ್ಯಯನ “ಪ್ರತಿಯೊಬ್ಬರು ವಿಶಿಷ್ಟ” ಎಂಬ ಪಾಠದಲ್ಲಿ ‘ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿದ ಕುವೆಂಪು ರವಗೆ ಚಿಕ್ಕಂದಿನಿಂದಲು ಕಥೆ, ಕವನ, ಪುಸ್ತಕ ಓದುವ, ಬರೆಯುವ ಅಭ್ಯಾಸ ಇತ್ತು ಎಂಬ ವಾಕ್ಯದ ನಂತರ “ಆನೇಕರ ಪ್ರೋತ್ಸಾಹದಿಂದ ಇವರು ಮುಂದೆ ಪ್ರಖ್ಯಾತ ಕವಿ ಬೇಡಿಕೊಂಡರು” ಎಂಬ ಸಾಲನ್ನು ಕೈಬಿಡುವುದು.

ಸದ್ಯ ಏಳು ಪಠ್ಯಗಳು ಮಾತ್ರ ಮಾರ್ಪಾಡು ಮಾಡಲು ಸರ್ಕಾರ ಆದೇಶ ಹೊರಡಿಸಿದೆ. ಮುಂದೆ ಯಾವುದಾದರು ಪಠ್ಯದ ಬಗ್ಗೆ ಪರಿಷ್ಕರಣೆ ಒತ್ತಾಯ ಕೇಳಿ ಬಂದ್ರೆ ಪರಿಶೀಲನೆ ಮಾಡಿ ಮಾರ್ಪಾಡು ಬಗ್ಗೆ ಸರ್ಕಾರ ನಿರ್ಧಾರ ಮಾಡಲಿದೆ. ಒಟ್ಟಾರೆ ವಿವಾದಗಳಿಗೆ ಕಾರಣವಾಗಿದ್ದ ಪಠ್ಯಗಳ ಮಾರ್ಪಾಡಿಗೆ ಸರ್ಕಾರ ಆದೇಶ ಮಾಡಿದ್ದು, ವಿವಾದ ತಣ್ಣಗಾಗುತ್ತಾ ಕಾದು ನೋಡಬೇಕು.

Live Tv

Share This Article
Leave a Comment

Leave a Reply

Your email address will not be published. Required fields are marked *