ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ದಾಂಡೇಲಿ ಮತ್ತು ಜೋಯಿಡಾ ತಾಲೂಕುಗಳ ಅಂಗನವಾಡಿ ಹಾಗೂ ಶಾಲೆಗಳಿಗೆ ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ನೀಡಿದ್ದಾರೆ.
ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದ್ದು, ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಡ್ಯೂಟಿಗೆ ಚಕ್ಕರ್ ಪಗಾರ್‌ಗೆ ಹಾಜರ್ – ಹಾಸ್ಟೆಲಿಗೆ ಬರುತ್ತಿಲ್ಲ ವಾರ್ಡನ್, ಮುಖ್ಯ ಅಡುಗೆ ಸಹಾಯಕ!
ಜಿಲ್ಲೆಯಲ್ಲಿ ಗಾಳಿ ಸಹಿತ ಹೆಚ್ಚಿನ ಮಳೆಯಾಗುತಿದ್ದು, ಗುರುವಾರ ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯ ಜೊತೆಗೆ ಗಾಳಿಯ ರಭಸವೂ ಹೆಚ್ಚಿರಲಿದೆ. ಈ ಹಿನ್ನಲೆಯಲ್ಲಿ ಸಾಂಪ್ರದಾಯಿಕ ಮೀನುಗಾರಿಕೆಗೂ ಕೂಡ ನಿರ್ಬಂಧ ಹೇರಲಾಗಿದೆ. ಅಲ್ಲದೇ ಜಿಲ್ಲೆಯ ಜಲಪಾತಗಳು ಹಾಗೂ ಕಡಲತೀರ ಪ್ರದೇಶಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಮುಂದುವರೆದಿದೆ. ಇದನ್ನೂ ಓದಿ: 9 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾದ ಮೈಕ್ರೋಸಾಫ್ಟ್
ಕೊಡಗು (Kodagu) ಜಿಲ್ಲೆಯಲ್ಲಿ ಮಳೆ ಮುಂದುವರೆದಿರುವ ಹಿನ್ನೆಲೆ ಗುರುವಾರ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟರಾಜ ಅವರು ಆದೇಶಿಸಿದ್ದಾರೆ