ಕಾರವಾರ\ಚಿಕ್ಕಮಗಳೂರು: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆ, ಅಂಗನವಾಡಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ರಜೆ ಘೋಷಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ಧಾಪುರ, ಯಲ್ಲಾಪುರ, ಜೋಯಿಡಾ ತಾಲೂಕಿನ ಶಾಲೆ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 5ರವರೆಗೂ ಹೆಚ್ಚಿನ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದನ್ನೂ ಓದಿ: ಅಪಘಾತ ಮಾಡಿದ ಬಸ್ ಚಾಲಕರಿಗೆ ಸನ್ಮಾನ – ಡಿಪೋ ಮ್ಯಾನೇಜರ್‌ನಿಂದ ಅಪಹಾಸ್ಯ
ಗುರುವಾರ ಜಿಲ್ಲೆಯ ಕಾರವಾರ, ಯಲ್ಲಾಪುರ, ಜೋಯಿಡಾ, ಸಿದ್ದಾಪುರ ಭಾಗದಲ್ಲಿ 100 ಮಿ.ಮೀಗೂ ಹೆಚ್ಚು ಮಳೆಯಾಗಿದೆ. ಶುಕ್ರವಾರ ಈ ಭಾಗದಲ್ಲಿ 150 ಮಿ.ಮೀಗೂ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಟಿಬಿ ಡ್ಯಾಂ 12 ಗೇಟ್ ಓಪನ್ – ನದಿಗೆ 35,100 ಕ್ಯೂಸೆಕ್ ನೀರು ಬಿಡುಗಡೆ
6 ತಾಲೂಕಿನ ಶಾಲೆಗಳಿಗೆ ರಜೆ
ಮಲೆನಾಡಿನಲ್ಲೂ ಮಳೆ ಅಬ್ಬರ ಮುಂದುವರಿದಿದ್ದು, ಜಿಲ್ಲೆಯ 6 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು, ಕಳಸ, ಕೊಪ್ಪ, ಶೃಂಗೇರಿ, ಎನ್‌ಆರ್‌ಪುರ ಹಾಗೂ ಮೂಡಿಗೆರೆ ತಾಲೂಕಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ.