ಶಿಲ್ಪಿ ಅರುಣ್ ಯೋಗಿರಾಜ್‍ಗೆ ಹೊಯ್ಸಳ ಮಹಾಶಿಲ್ಪಿ ಮಲ್ಲಿತಮ್ಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Public TV
1 Min Read

ಉಡುಪಿ: ಅಯೋಧ್ಯೆ ಬಾಲರಾಮನ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಅವರಿಗೆ ಹೊಯ್ಸಳ ಮಹಾಶಿಲ್ಪಿ ಮಲ್ಲಿತಮ್ಮ ರಾಷ್ಟ್ರೀಯ ಪ್ರಶಸ್ತಿ (Mallitamma Award) ನೀಡಿ ಗೌರವಿಸಲಾಗಿದೆ. ಕಟಪಾಡಿಯ ಶ್ರೀಮತ್ ಜಗದ್ಗುರು ಅನೆಗುಂದಿ ಮಹಾಸಂಸ್ಥಾನದ ಸರಸ್ವತಿ ಪೀಠ ಈ ಪ್ರಶಸ್ತಿ ಪ್ರದಾನ ಮಾಡಿದೆ.

ಪ್ರಶಸ್ತಿ ಪಡೆದು ಮಾತನಾಡಿದ ಅರುಣ್ ಯೋಗಿರಾಜ್, ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆ ನಂತರ ಅನೇಕ ವಿದ್ವಾಂಸರು, ಹಿರಿಯರ ಸಂಪರ್ಕ ಹಾಗೂ ಆಶೀರ್ವಾದ ಸಿಗುತ್ತಿದೆ. ಅಮರನಾಥದ ಉದ್ಭವ ಶಿವಲಿಂಗದ ಮುಂದೆ ನಂದಿಯ ವಿಗ್ರಹ ರಚಿಸುವ ಅವಕಾಶ ಸಿಕ್ಕಿದೆ ಇದೆಲ್ಲವೂ ಪುಣ್ಯದ ಕಾರ್ಯ ಎಂದರು. ಇದನ್ನೂ ಓದಿ: ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೊರೆ ಹೋದ ಭವಾನಿ ರೇವಣ್ಣ

ಜಗದ್ಗುರು ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳ ಪಟ್ಟಾಭಿಷೇಕ ಮಹೋತ್ಸವದ 14ನೇ ವರ್ಷದ ವಧರ್ಂತ್ಯುತ್ಸವ ಪ್ರಯುಕ್ತ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದೆ. ಈ ಸಂದರ್ಭದಲ್ಲಿ ವಿವಿಧ ಶಿಲ್ಪಕಲೆಗಳ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯುತ್ತಿದೆ. ಮೈಸೂರಿನ ಕಲಾವಿದ ಅರುಣ್ ಯೋಗಿರಾಜ್ ಅವರನ್ನು ಮುಖ್ಯ ಅತಿಥಿಯಾಗಿ ಆಯ್ಕೆ ಮಾಡಲಾಗಿತ್ತು.

ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮುದಾಯದ ವಿದ್ವಾಂಸರು, ಮುಖಂಡರು ಪಾಲ್ಗೊಂಡಿದ್ದರು. ಇದನ್ನೂ ಓದಿ: ವಾಲ್ಮೀಕಿ ನಿಗಮ ಕೇಸನ್ನು ಸಿಬಿಐಗೆ ವಹಿಸುವ ಅವಶ್ಯಕತೆ ಇಲ್ಲ: ಡಿಕೆಶಿ

Share This Article