‘ಬೊಂಬಾಟ್ ಭೋಜನ’ದಲ್ಲಿ ಶಿಲ್ಪಿ ಅರುಣ್ ಯೋಗಿರಾಜ್

Public TV
1 Min Read

ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿರುವ  ಅಡುಗೆ ಶೋ ‘ಬೊಂಬಾಟ್ ಭೋಜನ’ದಲ್ಲಿ (Bombat Bhoja) ಈ ಬಾರಿ ರಾಮನವಮಿ ಹಬ್ಬದ ಪ್ರಯುಕ್ತ ವಿಶೇಷ ಸಂಚಿಕೆಯನ್ನು ಪ್ರಸಾರ ಮಾಡಲಾಗುತ್ತಿದೆ.

ಈ ರಾಮನವಮಿಯ ವಿಶೇಷ ಸಂಚಿಕೆಯನ್ನು ಅಯೋಧ್ಯೆಯ ರಾಮಲಲ್ಲಾ ವಿಗ್ರಹವನ್ನು ಕೆತ್ತಿರುವ ಶಿಲ್ಪಿ ಅರುಣ್ ಯೋಗಿರಾಜ್ ರವರ ಮನೆಯಲ್ಲಿ ಸಂಭ್ರಮದಿಂದ ಆಚರಿಸಲಾಗಿದೆ. ಕನ್ನಡ ಕಿರುತೆರೆಯಲ್ಲಿ ಇದೇ ಮೊದಲ ಬಾರಿಗೆ ಅರುಣ್ ಯೋಗಿರಾಜ್ ರವರ ತುಂಬು ಕುಟುಂಬವನ್ನು ನೀವು ಈ ವಿಶೇಷ ಸಂಚಿಕೆಯಲ್ಲಿ ಕಾಣಬಹುದು. ಇನ್ನು ರಾಮಲಲ್ಲಾ ವಿಗ್ರಹದ ಬಗ್ಗೆ, ಅದನ್ನು ಕೆತ್ತುವಾಗ ಆದ ಅನುಭವದ ಬಗ್ಗೆ ಈ ವಿಶೇಷ ಸಂಚಿಕೆಯಲ್ಲಿ ಎಳೆಎಳೆಯಾಗಿ ಹೇಳಿದ್ದಾರೆ.

ಬೊಂಬಾಟ್ ಭೋಜನದ ರೂವಾರಿಯಾಗಿರುವ ಸಿಹಿ ಕಹಿ ಚಂದ್ರು (Sihi Kahi Chandru)ರವರು ಅರುಣ್ ಯೋಗಿರಾಜ್ Arun Yogiraj ಗೆ ಗೌರವಾರ್ಪಣೆಯೊಂದಿಗೆ, ಸನ್ಮಾನಿಸಿದ್ದಾರೆ. ಜೊತೆಗೆ ಈ ವಿಶೇಷ ಸಂಚಿಕೆಯಲ್ಲಿ ಗಾಯಕರಾದ  ಶ್ರೀ ಚಿನ್ಮಯಿ ಅತ್ರೇಯಸ್ ರವರು ಅತಿಥಿಯಾಗಿ ಆಗಮಿಸಿದ್ದು, ರಾಮನಾಮವನ್ನು ಭಕ್ತಿಯಿಂದ ಹಾಡಿ ಮನರಂಜಿಸಿದ್ದಾರೆ.

 

ಬೊಂಬಾಟ್ ಭೋಜನದಲ್ಲಿ ರಾಮನವಮಿ ವಿಶೇಷ ಸಂಚಿಕೆಯು ಇದೇ ಬುಧವಾರ (ಏ.17) ಮಧ್ಯಾಹ್ನ 12 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

Share This Article