ಬೆಳಗಾವಿ: ಹಿಟ್ ಸ್ಟ್ರೋಕ್ಗೆ (Heat Stroke) ರಾಜ್ಯದಲ್ಲಿ ಎರಡನೇಯ ಬಲಿಯಾಗಿದೆ. ಬಿಸಿಲಿನ ತಾಪಕ್ಕೆ ಬೆಳಗಾವಿ (Belagavi) ಜಿಲ್ಲೆಯ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಲಿಯಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ನಿವಾಸಿಯಾಗಿರುವ ವೆಂಕಟೇಶ್ ಬಳ್ಳಾರಿ (35) ಮೃತ ದುರ್ದೈವಿ. ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯತ್ ಮುಖ್ಯಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್ಐಎ ಕೋರ್ಟ್
ಸೋಮವಾರ (ಏ.21) ಬಸವೇಶ್ವರ ಜಯಂತಿ ಸಂದರ್ಭದಲ್ಲಿ ಫೋಟೋ ಪೂಜೆ ಬಳಿಕ ಮೆರವಣಿಗೆ ಸಂದರ್ಭದಲ್ಲಿ ತಲೆ ತಿರುಗಿ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಈ ಕುರಿತು ಆಪ್ತರು ಮಾಹಿತಿ ನೀಡಿದ್ದು, ವೆಂಕಟೇಶ ಅವರು ಬಿಸಿಲಿನ ತಾಪ ತಾಳಲಾರದೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್ಐಆರ್ಗೆ ಕೋರ್ಟ್ ಆದೇಶ

