ಕೇಂದ್ರದ ಮರು ಪರಿಶೀಲನೆ ಪೂರ್ಣಗೊಳ್ಳುವವರೆಗೂ ದೇಶದ್ರೋಹ ಕೇಸ್‌ ದಾಖಲಿಸುವಂತಿಲ್ಲ: ಸುಪ್ರೀಂ

Public TV
1 Min Read

ನವದೆಹಲಿ: ಕೇಂದ್ರ ಸರ್ಕಾರದ ಮರುಪರಿಶೀಲನೆ ಪೂರ್ಣಗೊಳ್ಳುವವರೆಗೆ ದೇಶದ್ರೋಹದ ಅಡಿ ಪ್ರಕರಣ ದಾಖಲಿಸುವಂತಿಲ್ಲ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ, ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ಹಿಮಾ ಕೊಹ್ಲಿ ಅವರಿದ್ದ ನ್ಯಾಯಪೀಠ ಈ ಮಧ್ಯಂತರ ಆದೇಶ ನೀಡಿದೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್‌ 124ಎ (ದೇಶದ್ರೋಹ) ಅಡಿಯಲ್ಲಿ ಪ್ರಕರಣ ದಾಖಲಾಗಿ ಜೈಲಿನಲ್ಲಿರುವವರು ಜಾಮೀನು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರವು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸುವ ವರೆಗೆ ಸರ್ಕಾರಗಳು ದೇಶದ್ರೋಹ ಪ್ರಕರಣವನ್ನು ಬಳಸಿಕೊಳ್ಳುವಂತಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ದೇವಸ್ಥಾನದ ಮೇಲೆ ನಿರ್ಮಾಣವಾದ ಯಾವುದೇ ಮಸೀದಿಯನ್ನೂ ಬಿಡುವುದಿಲ್ಲ, ಎಲ್ಲವನ್ನೂ ಕೆಡವುತ್ತೇವೆ: ಬಿಜೆಪಿ ನಾಯಕ

ದೇಶದ್ರೋಹ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಪೀಠ ಜುಲೈಗೆ ಮುಂದೂಡಿಕೆ ಮಾಡಿದೆ.

ಕೇಂದ್ರ ಹೇಳಿದ್ದೇನು?
ಸೋಮವಾರ ದೇಶದ್ರೋಹದ ಕಾನೂನನ್ನು ಪುನರ್ ಪರಿಶೀಲಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‍ಗೆ ಕೇಂದ್ರ ಸರ್ಕಾರ ತಿಳಿಸಿತ್ತು ದೇಶದ ಸಾರ್ವಭೌಮತ್ವದ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ. ಕಾಯ್ದೆಯ ಪುನರ್ ಪರಿಶೀಲನೆ ಪೂರ್ಣಗೊಳ್ಳುವವರೆಗೂ ದೇಶದ್ರೋಹದ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಬಾರದು ಎಂದು ಕೇಂದ್ರ ಅಫಿಡವಿಟ್‌ ಸಲ್ಲಿಸಿತ್ತು.

court order law

ಬ್ರಿಟೀಷರ ಕಾಲದ ಕಾಯ್ದೆಗಳನ್ನು ಬದಿಗೆ ಸರಿಸಲು ಸರ್ಕಾರ ತೀರ್ಮಾನಿಸಲಾಗಿದೆ. ಇದರ ಭಾಗವಾಗಿ ದೇಶದ್ರೋಹ ಕಾನೂನು ಪರಿಶೀಲನೆ ಮಾಡುತ್ತಿದ್ದೇವೆ. ದೇಶದ್ರೋಹ ಕಾಯ್ದೆಗೆ ಸಂಬಂಧಿಸಿ ಹಲವು ವರ್ಗಗಳಿಂದ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳನ್ನು ಪ್ರಧಾನಿ ಮೋದಿ ಪರಿಗಣಿಸಿದ್ದಾರೆ. ಈ ಕಾಯ್ದೆಯ ದುರ್ಬಳಕೆ ಆಗುತ್ತಿರುವ ಬಗ್ಗೆಯೂ ಗಮನ ಹರಿಸಿದ್ದಾರೆ ಎಂದು ಕೇಂದ್ರ ಅಫಿಡವಿಟ್‌ನಲ್ಲಿ ಉಲ್ಲೇಖಿಸಿತ್ತು.

ಸ್ವಾತಂತ್ರ್ಯ ಸಿಕ್ಕಿದ ಬಳಿಕವೂ 75 ವರ್ಷದ ಹಿಂದಿನ ಕಾನೂನು ಅಗತ್ಯವಿದೆಯೇ ಎಂದು 2021ರ ಜುಲೈನಲ್ಲಿ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು.

Share This Article
Leave a Comment

Leave a Reply

Your email address will not be published. Required fields are marked *