ಮೇ 13ರಿಂದ ಕನ್ನಡದಲ್ಲೂ ನೋಡಿ ‘ದಿ ಕಾಶ್ಮೀರಿ ಫೈಲ್ಸ್’ ಸಿನಿಮಾ

Public TV
1 Min Read

ಕೇವಲ ಹಿಂದಿಯಲ್ಲಿ ಮಾತ್ರ ರಿಲೀಸ್ ಆಗಿದ್ದ ದಿ ಕಾಶ್ಮೀರಿ ಫೈಲ್ಸ್ ಸಿನಿಮಾ, ಇದೀಗ ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಡಬ್ ಆಗಿ ಜೀ 5 ಓಟಿಸಿಯಲ್ಲಿ ರಿಲೀಸ್ ಆಗುತ್ತಿದೆ. ಕಾಶ್ಮೀರ ಪಂಡಿತರ ಮೇಲಾದ ದೌರ್ಜನ್ಯ, ನಿರಾಶ್ರಿತರ ಹತ್ಯೆ ಕುರಿತು ತಯಾರಿಸಿದ್ದ ಈ ಸಿನಿಮಾ ಬಾಕ್ಸಾಫೀಸ್‌ನ್ನು ಕೊಳ್ಳೆ ಹೊಡೆದಿತ್ತು. ಇದನ್ನೂ ಓದಿ : ಪುನೀತ್‌ಗೆ ಅವಮಾನ: ತಿರುಪತಿ ತಿರುಮಲ ದೇವಸ್ಥಾನಕ್ಕೆ ಅಭಿಮಾನಿಗಳು ಮುತ್ತಿಗೆ

ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯ ನಾಯಕರು, ಸೆಲೆಬ್ರಿಟಿಗಳು, ಜನಸಾಮಾನ್ಯರು ಸಿನಿಮಾ ಕಣ್ತುಂಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇಷ್ಟೆಲ್ಲಾ ಸಂಚಲನ ಸೃಷ್ಟಿಸಿದ್ದ ಕಾಶ್ಮೀರ್ ಫೈಲ್ಸ್ ಸಿನಿಮಾ ಮೇ 13ಕ್ಕೆ ಜೀ5 ಒಟಿಟಿಯಲ್ಲಿ ಪ್ರಿಮಿಯರ್ ಆಗಲಿದೆ. ಇದನ್ನೂ ಓದಿ : ಖ್ಯಾತ ನಿರ್ದೇಶಕ ಅರವಿಂದ್ ಕೌಶಿಕ್ ಅರೆಸ್ಟ್

ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ಅತಿರಥ ಮಹಾರಥ ತಾರಬಳಗ ನಟಿಸಿದ್ದರು. ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ ಮತ್ತು ದರ್ಶನ್ ಕುಮಾರ್ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಅಮೋಘವಾಗಿ ಅಭಿನಯಿಸಿದ್ದರು. ಇದನ್ನೂ ಓದಿ : ವಾಮನ ತೆಕ್ಕೆಗೆ ತುಳುನಾಡ ಬೆಡಗಿ ರಚನಾ ರೈ

1991ರ ಸಮಯದಲ್ಲಿ ಕಾಶ್ಮೀರದಲ್ಲಿ ನಡೆದ ಪಂಡಿತರ ಹತ್ಯೆ ಹಾಗೂ ವಲಸೆಯನ್ನು ಸಿನಿಮಾವನ್ನು ಕಟ್ಟಿಕೊಡಲಾಗಿತ್ತು. ಹೀಗಾಗಿ ಈ ಸಿನಿಮಾ ಬಗ್ಗೆ ವಿರೋಧವೂ ವ್ಯಕ್ತವಾಗಿತ್ತು. ವಿರೋಧ ನಡುವೆಯೂ ಕಾಶ್ಮೀರ್ ಫೈಲ್ಸ್ ಗೆಲುವಿನ ನಗೆ ಬೀರಿತ್ತು. ಬಾಲಿವುಡ್ ನಲ್ಲಿ ತಯಾರಾಗಿದ್ದ ಈ ಸಿನಿಮಾ ಕೇವಲ ಹಿಂದಿ ಭಾಷೆಯಲ್ಲಿ ತೆರೆಗೆ ಬಂದಿತ್ತು. ಆದ್ರೇ ಜೀ 5 ಒಟಿಟಿಯಲ್ಲಿ ನಾಲ್ಕು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಹಿಂದಿ, ತಮಿಳು, ತೆಲುಗು ಮತ್ತು ಕನ್ನಡ ಭಾಷೆಯಲ್ಲಿ ಸಿನಿಮಾ ಒಟಿಟಿಯಲ್ಲಿ ಪ್ರದರ್ಶನ ಕಾಣಲಿದೆ.

Share This Article
Leave a Comment

Leave a Reply

Your email address will not be published. Required fields are marked *